For the best experience, open
https://m.samyuktakarnataka.in
on your mobile browser.

ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

05:16 PM Jun 14, 2024 IST | Samyukta Karnataka
ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಪೋಕ್ಸೋ ಪ್ರಕರಣ ಎದುರಿಸುತ್ತಿರುವ ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ಯಕ್ಕೆ ಬಿಎಸ್‌ವೈ ನಿರಾಳವಾಗಿದ್ದು ಮುಂದಿನ ವಿಚಾರಣೆಯವರೆಗೆ ಬಂಧಿಸದಂತೆ ತನಿಖಾಧಿಕಾರಿಗಳಿಗೆ ಸೂಚಿಸಿದ ಹೈಕೋರ್ಟ್‌. ಜೂನ್‌ 17ರಂದು ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಬಿಎಸ್‌ವೈಗೆ ಪೀಠ ಸೂಚಿಸಿದೆ.