ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯಡಿಯೂರಪ್ಪನವರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದಿರಿ

05:25 PM Nov 06, 2024 IST | Samyukta Karnataka

ಹಾವೇರಿ(ಸವಣೂರು): ಮುಖ್ಯಮಂತ್ರಿಗಳು ಆರೋಪಿ ಸ್ಥಾನದಲ್ಲಿದ್ದು ಕೆಲಸ ನಿರ್ವಹಿಸುತ್ತಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ ಯಡಿಯೂರಪ್ಪನವರ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ಇಂದು ರೋಡ್ ಶೋ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಕಳೆದ 30-40 ವರ್ಷಗಳಿಂದ ಸುದೀರ್ಘ ಹೋರಾಟ ಮಾಡಿ ಬಡವರು, ರೈತರ ಪರವಾಗಿ ಧ್ವನಿ ಎತ್ತಿ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ಸರ್ವತೋಮುಖ ಅಭಿವೃದ್ಧಿಯ ಆಡಳಿತ ನೀಡಿದ್ದಾರೆ. ಯಡಿಯೂರಪ್ಪ ಅವರು ಸಿದ್ದರಾಮಯ್ಯರಂತೆ ಅದೃಷ್ಟದ ಮುಖ್ಯಮಂತ್ರಿಗಳಲ್ಲ; ಸಿದ್ದರಾಮಯ್ಯನವರು ಬಡವರು, ರೈತರ ಪರವಾಗಿ ಹೋರಾಟ ಮಾಡಿಲ್ಲ; ಚಳವಳಿ ಮಾಡಿದವರಲ್ಲ ಎಂದು ಟೀಕಿಸಿದರು.
ಯಡಿಯೂರಪ್ಪನವರ ಸರಕಾರ ಕೊಟ್ಟ ಭಾಗ್ಯಲಕ್ಷ್ಮಿ ಯೋಜನೆಯನ್ನು ಸಿದ್ದರಾಮಯ್ಯನವರ ಸರಕಾರ ಸ್ಥಗಿತಗೊಳಿಸಿದೆ. ಕಾಂಗ್ರೆಸ್ ಸರಕಾರ ಬಡವರ ವಿರೋಧಿ ಸರಕಾರ. ಕಾಂಗ್ರೆಸ್ ಪಕ್ಷದ್ದು ರೈತವಿರೋಧಿ ಸರಕಾರ. ಅಭಿವೃದ್ಧಿ ಶೂನ್ಯ ಸರಕಾರ ಇದು. ಈ ಸರಕಾರ ಬದುಕಿದ್ದೂ ಸತ್ತಂತಿದೆ. ಈ ಭ್ರಷ್ಟ ಸರಕಾರವನ್ನು ಎಷ್ಟು ಬೇಗ ಕಿತ್ತೆಸೆಯುತ್ತೇವೋ ಅಷ್ಟು ಒಳ್ಳೆಯದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಹಾಗೂ ಇತರ ಪಕ್ಷಗಳ ಶಾಸಕರಿಗೆ ರಸ್ತೆ, ಶಾಲೆ, ಆಸ್ಪತ್ರೆ ಮತ್ತಿತರ ಕಾಮಗಾರಿ, ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರವಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ತಿಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷವು ಕಳೆದೆರಡು ವರ್ಷಗಳಲ್ಲಿ ಯಾವುದೇ ಹೊಸ ಯೋಜನೆ, ಅಭಿವೃದ್ಧಿ ಕಾರ್ಯವನ್ನು ಘೋಷಿಸಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆಯವರು, ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಾಗುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಹೇಳುತ್ತಾರೆ. ಮತ್ತೊಂದು ಕಡೆ ಸರಕಾರಿ ನೌಕರರಿಗೆ ಸಂಬಳ ಕೊಡಲು ಕೂಡ ಈ ಸರಕಾರಕ್ಕೆ ಆಗುತ್ತಿಲ್ಲ. ಬೆಂಗಳೂರು, ದಾವಣಗೆರೆಯಲ್ಲಿ ಕಾಮಗಾರಿಯ ಹಣ ಸಿಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ವಿವರಿಸಿದರು.
ನಿನ್ನೆ ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸಹಾಯಕನ (ಪಿ.ಎ.) ಬೆದರಿಕೆಯಿಂದ ಎಸ್‍ಡಿಎ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡದ್ದು ವರದಿಯಾಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಬಹಿರಂಗವಾಗಿದೆ. ನಿಗಮದಿಂದ ದೋಚಿದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂದು ತಿಳಿಸಿದರು.

Tags :
B. Y. VijayendrabjpBSYelectionhaverisiddaramaih
Next Article