ಯತ್ನಾಳ ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ಹೈಕೋರ್ಟ್ ತಡೆ
07:41 PM Jan 29, 2024 IST | Samyukta Karnataka
ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ತಮ್ಮ ಪೋಸ್ಟ್ ಕಾಂಗ್ರೆಸ್ ಸರ್ಕಾರ ನಮ್ಮ ಸಿದ್ಧಸಿರಿ ಸಕ್ಕರೆ ಹಾಗು ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ ಎಂದು ಬರೆದುಕೊಂಡಿದ್ದಾರೆ.