ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

‘ಯಲಾ ಕುನ್ನಿ’ಗೆ ವಜ್ರಮುನಿ ದನಿ ಕೋಮಲ್ ಕಾಮಿಡಿ ಕಮಾಲ್

04:34 PM Sep 16, 2024 IST | Samyukta Karnataka

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕ ವಜ್ರಮುನಿ ಡೈಲಾಗ್ ‘ಯಲಾ ಕುನ್ನಿ..’ ಇಂದಿಗೂ ಅದೇ ಖದರ್‌ನ್ನು ಹೊಂದಿದೆ.
ಈ ಡೈಲಾಗ್‌ ಇಟ್ಟುಕೊಂಡೇ ನಟ ಕೋಮಲ್ ವಜ್ರಮುನಿ ಅವರ ರೂಪದಲ್ಲಿ ಕಾಣಿಸಿಕೊಂಡಿರುವ ಚಿತ್ರವೆ ಯಲಾ ಕುನ್ನಿ. ಇಂದು ಈ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದ್ದು ನೋಡುಗರ ಮನಸೂರೆಗೊಂಡಿದೆ. ಯಲಾ ಕುನ್ನಿ ಚಿತ್ರಕ್ಕೆ ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ. ‘ಸೌಭಾಗ್ಯ ಸಿನಿಮಾಸ್’ ಬ್ಯಾನರ್​ ಮೂಲಕ ಮಹೇಶ್ ಗೌಡ ಅವರು ನಿರ್ಮಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ಎನ್.ಆರ್. ಪ್ರದೀಪ್ ಅವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ‘ನವರಸ ನಾಯಕ’ ಜಗ್ಗೇಶ್ ಅವರ ಮಗ ಯತಿರಾಜ್ ಹಾಗೂ ವಜ್ರಮುನಿ ಅವರ ಮೊಮ್ಮಗ ಆಕರ್ಶ್ ಅವರು ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟ್ರೈಲರ್‌ ನೋಡಿದರೆ 90ರ ದಶಕದ ಮೆಲುಕು ಹಾಕಿದಂತಾಗುತ್ತದೆ… ಒಮ್ಮೆ ಅದರ ಝಲಕ್ ನೋಡಿ…

Next Article