ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯಲ್ಲಾಪುರ ಬಳಿ ಭೀಕರ ಅಪಘಾತ: ಪರಿಹಾರ ಘೋಷಿಸಿದ ಕೇಂದ್ರ ಸರಕಾರ

03:59 PM Jan 22, 2025 IST | Samyukta Karnataka

ನವದೆಹಲಿ: ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಇಂದು ಸಂಭವಿಸಿದ ವಾಹನ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ PMO ಪೋಸ್ಟ್‌ ಮಾಡಿದ್ದು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಣೆ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

Tags :
#ಅಪಘಾತ#ಕೇಂದ್ರ#ನರೇಂದ್ರಮೋದಿ#ಪರಿಹಾರ#ಸಿದ್ದರಾಮಯ್ಯ
Next Article