ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

"ಯಾಕೆ" ಚಿತ್ರದ ಶೀರ್ಷಿಕೆ ಅನಾವರಣ: ನವಂಬರ್‌ನಲ್ಲಿ ಚಿತ್ರೀಕರಣ ಆರಂಭ

05:45 PM Oct 21, 2024 IST | Samyukta Karnataka

ಬೆಂಗಳೂರು: ಇತ್ತೀಚಿಗೆ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಕಿ ಪ್ಯಾನ್ ಇಂಡಿಯಾ ಮಟ್ಟದ. ಚಿತ್ರಗಳು ಸೆಟ್ಟೇರುತ್ತಿವೆ. ಇದೀಗ ಆ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಕನ್ನಡ ಮತ್ತು ತೆಲುಗು ಸೇರಿ ಎರಡು ಭಾಷೆಯಲ್ಲಿ ಈ ಚಿತ್ರ ಮೂಡಿ ಬರಲಿದೆ.

ಈ ಚಿತ್ರಕ್ಕೆ ಕನ್ನಡದಲ್ಲಿ ,"ಯಾಕೆ" ಎನ್ನುವ ಶೀರ್ಷಿಕೆ ಇಟ್ಟಿದ್ದು, ತೆಲುಗಿನಲ್ಲಿ "ಸಂಸ್ಥಾನಂ" ಎಂಬ ಟೈಟಲ್ ಇಡಲಾಗಿದೆ. ಸೀತಾ ಹರ್ಷವರ್ಧನ್ ಅವರು ಎರಡು ಭಾಷೆಯಲ್ಲಿ ನಿರ್ಮಾಣ ಮಾಡುತ್ತಿದ್ದು, ಪ್ರೇಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಎರಡು ಚಿತ್ರಗಳ ಶೀರ್ಷಿಕೆ ಅನಾವರಣ ಮತ್ತು ಸಿರಿ ಸಿನಿಮಾಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ನಟರಾದ ಒರಟ ಪ್ರಶಾಂತ್ , ಶ್ರೀನಗರ ಕಿಟ್ಟಿ , ನಿರ್ಮಾಪಕ ಟಿಪಿ ಸಿದ್ದರಾಜು, ಕಲಾವಿದೆ ಅಂಬುಜಾ ಸೇರಿದಂತೆ ಹಲವು ಕಲಾವಿದರು ಆಗಮಿಸಿ ಶೀರ್ಷಿಕೆ ಅನಾವರಣ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು.

ನಿರ್ಮಾಪಕಿ ಸೀತಾ ಹರ್ಷವರ್ಧನ್ ಮಾತನಾಡಿ ನಾನು ಕನ್ನಡದ ಹಲವು ಸಿನಿಮಾ ಮತ್ತು ಧಾರಾವಾಹಿಯಲ್ಲಿ ನಟಿಸಿದ್ದೇನೆ. ಜೊತೆಗೆ ತೆಲುಗು ದಾರಾವಾಹಿಗಳಲ್ಲೂ ಸಹ ನಟಿಸಿದ್ದೇನೆ. ಒಮ್ಮೆ ನಿರ್ದೇಶಕ ಪ್ರೇಮ್ ಅವರು ಹೇಳಿದ ಕಥೆ ನನಗೆ ಇಷ್ಟವಾಯಿತು. ಹೀಗಾಗಿ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನವೆಂಬರ್ ನಲ್ಲಿ ನಮ್ನ ನೂತನ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು ಮುಂದಿನ ವರ್ಷ ಏಪ್ರಿಲ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಉದ್ದೇಶ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು

ನಮ್ಮ ಪ್ರಯತ್ನಕ್ಕೆ ಅಮೆಜಾನ್ ಮತ್ತು ಹೈದರಾಬಾದಿನ ಖುಷಿ ಸಿನಿಮಾ ಸಂಸ್ಥೆ ಜೊತೆಗೂಡಿದೆ. ಇದರಿಂದಾಗಿ ಚಿತ್ರ ನಿರ್ಮಾಣಕ್ಕೆ ಮತ್ತಷ್ಟು ಬಲ ಬಂದಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುವ ಉದ್ದೇಶ ನಮ್ಮದು ಎಂದು ಅವರು ಹೇಳಿದರು.

ನಿರ್ದೇಶಕ ಪ್ರೇಮ್ ಮಾತನಾಡಿ ಇದು ಕನ್ನಡದಲ್ಲಿ ನನ್ನ ಮೊದಲ ಚಿತ್ರ‌ ಒಳ್ಳೆಯ ಕಂಟೆಂಟ್ ಇದೆ. ನವಂಬರ್ ಮಧ್ಯಭಾಗದಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಖುಷಿ ಸಿನಿಮಾ ಸಂಸ್ಥೆಯ ಪಾಲುದಾರರು ಚಿತ್ರದ ಬಗ್ಗೆ ಮಾಹಿತಿ ನೀಡಿ ಹೊಸಹೊಸ ಕಂಟೆಂಟ್ ಗಳು ಬಂದರೆ , ಅವುಗಳನ್ನು ಚಿತ್ರ ನಿರ್ಮಾಣ ಮಾಡಲು ನಮ್ಮ ಸಂಸ್ಥೆ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು‌.

Tags :
#Ganeshranebennuru#KFI#sandalwood#ಯಾಕೆ
Next Article