ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯಾರ ಮೇಲೂ ಗೂಬೆ ಕೂರಿಸುವುದಿಲ್ಲ: ಸಿಎಂ ಸಿದ್ದು

01:15 PM Aug 13, 2024 IST | Samyukta Karnataka

ಕೊಪ್ಪಳ: ಟಿ.ಬಿ.ಬೋರ್ಡ್ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕ ಆಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಲ್ಲೂಕಿನ ಬಸಾಪುರ ಬಳಿ ಏರ್ ಸ್ಟ್ರೀಪ್ ನಲ್ಲಿ ಮಂಗಳವಾರ ನಡೆದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕದವದರು ಕೂಡಾ ಬೋರ್ಡಿನಲ್ಲಿ ಇರುತ್ತಾರೆ. ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡುತ್ತಾರೆ. ೧೯ನೇ ಗೇಟಿನ ಚೈನ್ ಕಟ್ ಆಗಿ, ನೀರು ಹೋಗುತ್ತಿದೆ. ರಾಜ್ಯ ಸರ್ಕಾರದ ಹೊಣಗೇಡಿತನ ಎಂದರೆ ಏನು ಅರ್ಥ. ಅನುದಾನ ನೀಡುತ್ತೇವೆ ಅಷ್ಟೇ. ೧೦೫ ಟಿಎಂಸಿ ನೀರು ಸಂಗ್ರಹವಾಗಿತ್ತು. ೬೦ ಟಿಎಂಸಿ ನೀರು ಬಿಡಬೇಕು. ರೈತರಿಗೆ ವ್ಯವಸಾಯಕ್ಕೆ ತೊಂದರೆ ಆಗುವುದಿಲ್ಲ. ಇನ್ನೂ ಮಳೆ ಇದ್ದು, ಜಲಾಶಯ ತುಂಬುವ ಭರವಸೆ ಇಟ್ಟುಕೊಳ್ಳೋಣ. ಹಳೆ ಜಲಾಶಯವಾಗಿದ್ದು, ೧೯೫೩ರಲ್ಲಿ‌ ಜಲಾಶಯ ನಿರ್ಮಾಣ ಪೂರ್ಣಗೊಂಡಿದೆ. ಅವತ್ತಿನಿಂದ ಈವರೆಗೂ ಯಾವುದೇ ದುರಸ್ತಿ ಆಗಲಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಆಧುನೀಕರಣದ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದರು. ಸಚಿವರಾದ ಜಮೀರ್ ಅಹ್ಮದ್, ಬೋಸರಾಜು, ಶಿವರಾಜ್ ತಂಗಡಗಿ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಎಂಎಲ್ಸಿ ಹಂಪನಗೌಡ ಬಾದರ್ಲಿ ಇದ್ದರು.

Tags :
#cmsiddaramaiah#Tungabhadra#TungabhadraDam#TungabhadraReservoir
Next Article