For the best experience, open
https://m.samyuktakarnataka.in
on your mobile browser.

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ

11:50 AM Nov 07, 2024 IST | Samyukta Karnataka
ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ

ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ.

ಹುಬ್ಬಳ್ಳಿ,: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, "ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ" ಎಂದು ತಿಳಿಸಿದರು.

Tags :