For the best experience, open
https://m.samyuktakarnataka.in
on your mobile browser.

ಯುದ್ಧ ವಿಮಾನ ತಯಾರಿಕ ಘಟಕ ಉದ್ಘಾಟಿಸಿದ ಮೋದಿ

12:26 PM Oct 28, 2024 IST | Samyukta Karnataka
ಯುದ್ಧ ವಿಮಾನ ತಯಾರಿಕ ಘಟಕ ಉದ್ಘಾಟಿಸಿದ ಮೋದಿ

ಗುಜರಾತ್‌ : ವಡೋದರದ ವಿಮಾನ ತಯಾರಿಕೆಯ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಿ ಪೆಡ್ರೊ ಸಾಂಚೇಜ್ ಅವರು ಉದ್ಘಾಟಿಸಿದರು.
ಉದ್ಘಾಟನೆಗೆ ಮುನ್ನ ವಡೋದರದ ರಸ್ತೆಗಳಲ್ಲಿ ಪ್ರಧಾನಿ ಮೋದಿ, ಸ್ಪೇನ್​ ಅಧ್ಯಕ್ಷನ ಜೊತೆಗೆ ರೋಡ್​ ಶೋ ನಡೆಸಿದರು.

ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್​ನ ವಡೋದರಾದಲ್ಲಿ ಚಾಲನೆಗೊಂಡಿದ್ದು. ಟಾಟಾ ಏರ್​ಕ್ರಾಫ್ಟ್ ಕಾಂಪ್ಲೆಕ್ಸ್​ನಲ್ಲಿ ಸಿ-295 ವಿಮಾನ ತಯಾರಿಕೆಯ ಘಟಕ ಇದಾಗಿದೆ. ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್​ನ ಕ್ಯಾಂಪಸ್​ನಲ್ಲಿರುವ ಈ ಘಟಕದಲ್ಲಿ ಸ್ಪೇನ್ ಮೂಲದ ವಿಮಾನ ತಯಾರಿಕೆಯ ಸಂಸ್ಥೆ ಏರ್​ಬಸ್ ಸಹಯೋಗದಲ್ಲಿ ಸಿ-295 ಮಿಲಿಟರಿ ವಿಮಾನಗಳನ್ನು ತಯಾರಿಸಲಾಗುತ್ತದೆ. ಒಟ್ಟಾರೆ ಈ ಯೋಜನೆಯಲ್ಲಿ 56 ವಿಮಾನಗಳ ತಯಾರಿಕೆಗೆ ಒಪ್ಪಂದವಾಗಿದೆ. ಏರ್​ಬಸ್ ಸಂಸ್ಥೆ ತನ್ನ ದೇಶದಲ್ಲಿರುವ ತಯಾರಿಕಾ ಘಟಕದಿಂದ 16 ವಿಮಾನಗಳನ್ನು ತಯಾರಿಸಿ ಅಲ್ಲಿಂದಲೇ ನೇರವಾಗಿ ಭಾರತಕ್ಕೆ ಕಳುಹಿಸಲಿದೆ. ಇನ್ನುಳಿದ 40 ವಿಮಾನಗಳನ್ನು ಟಾಟಾ ಸಂಸ್ಥೆಯ ವಡೋದರಾ ಫ್ಯಾಕ್ಟರಿಯಲ್ಲಿ ತಯಾರಿಸಲಾಗುತ್ತದೆ.

Tags :