ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯುಪಿಎಸ್‌ಸಿಯಲ್ಲಿ ಸೌಭಾಗ್ಯ ಬೀಳಗಿಮಠಗೆ 101ನೇ ರ‍್ಯಾಂಕ್

08:49 PM Apr 16, 2024 IST | Samyukta Karnataka

ದಾವಣಗೆರೆ: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ(ಯುಪಿಎಸ್‌ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ದಾವಣಗೆರೆಯ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್ ಪಡೆದಿದ್ದಾರೆ.
ಸೌಭಾಗ್ಯ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಪದವೀಧರೆಯಾಗಿದ್ದು, ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿಯಾಗಿದ್ದಾರೆ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ.
ಯಾವುದೇ ಕೇಂದ್ರದಲ್ಲಿ ಕೋಚಿಂಗ್ ಪಡೆದಿರಲಿಲ್ಲ. ಆನ್‌ಲೈನ್ ಮಾಕ್ ಟೆಸ್ಟ್ ಸರಣಿ ಅಟೆಂಡ್ ಮಾಡಿದ್ದೆ ಅಷ್ಟೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬೋಧಕಿ ಅಶ್ವಿನಿ ಎಂ. ಅವರು ನನ್ನನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಪರೀಕ್ಷೆಗೆ ಸಿದ್ಧತೆ ನಡೆಸಲು ಪ್ರೋತ್ಸಾಹ ನೀಡಿದ್ದಾರೆ. ಪರೀಕ್ಷೆ ತಯಾರಿಗೆ ಅವರೇ ಎಲ್ಲ ರೀತಿಯ ಮಾರ್ಗದರ್ಶನ ನೀಡಿದರು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Next Article