For the best experience, open
https://m.samyuktakarnataka.in
on your mobile browser.

ಯುವತಿಯರ ಮೃತದೇಹ ತಡರಾತ್ರಿ ಹಸ್ತಾಂತರ: ರೆಸಾರ್ಟ್‌ ಮಾಲೀಕ, ಮ್ಯಾನೇಜರ್ ಬಂಧನ

01:29 PM Nov 18, 2024 IST | Samyukta Karnataka
ಯುವತಿಯರ ಮೃತದೇಹ ತಡರಾತ್ರಿ ಹಸ್ತಾಂತರ  ರೆಸಾರ್ಟ್‌ ಮಾಲೀಕ  ಮ್ಯಾನೇಜರ್ ಬಂಧನ

ಉಳ್ಳಾಲ: ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮ್ಯಾನೇಜರ್ ಭರತ್ ಎಂದು ಗುರುತಿಸಲಾಗಿದೆ.
ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈಜುಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ಭಾನುವಾರ ತಡರಾತ್ರಿ ಆಗಮಿಸಿದ್ದು, ಮೂವರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಮೂವರ ಮೃತದೇಹವನ್ನು ತಡರಾತ್ರಿ ಮೈಸೂರಿಗೆ ಕೊಂಡೊಯ್ಯಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಂಧಿತ ಇಬ್ಬರನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು ಮೂಲದ ಮೂವರು ವಿದ್ಯಾರ್ಥಿನಿಯರು ಶನಿವಾರ ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್‌ನಲ್ಲಿ ತಂಗಿದ್ದರು. ಭಾನುವಾರ ರೆಸಾರ್ಟ್‌ನ ಈಜುಕೊಳದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿತ್ತು.