ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಂಗೇರಿದ ರಾಜ್ಯಕೀಯ

03:00 AM Feb 27, 2024 IST | Samyukta Karnataka

ಬೆಂಗಳೂರು: ಇಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇದಕ್ಕೆ ಅಂತಿಮ ಹಂತದ ಸಿದ್ಧತೆ ಪೂರ್ಣಗೊಂಡಿದೆ. ವಿಧಾನಸೌಧದಲ್ಲಿ ಮಂಗಳವಾರ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದ್ದು ಐದನೇ ಅಭ್ಯರ್ಥಿ ಸ್ಪರ್ಧೆಯಲ್ಲಿರುವುದು ಚುನಾವಣಾ ಕಣ ರಂಗೇರುವಂತೆ ಮಾಡಿದೆ. ಅಷ್ಟೇ ಅಲ್ಲ ಮೂರೂ ಪಕ್ಷಗಳಲ್ಲಿ ಇದು ಅಡ್ಡಮತದಾನದ ಆತಂಕ ಸೃಷ್ಟಿಸಿದೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲಾಬಲ ೧೩೫ ಇತ್ತು. ಇದೀಗ ರಾಜಾ ವೆಂಕಟಪ್ಪ ನಾಯ್ಕ ಅವರು ಅಕಾಲಿಕ ಮೃತಪಟ್ಟ ಹಿನ್ನೆಲೆಯಲ್ಲಿ ಸದ್ಯ ಕಾಂಗ್ರೆಸ್ ಬಲ ೧೩೪ ಕ್ಕಿಳಿದಿದೆ. ಬಿಜೆಪಿ ೬೬, ಜೆಡಿಎಸ್ ೧೯ ಸ್ಥಾನಗಳನ್ನು ಹೊಂದಿದೆ. ಈಗಾಗಲೇ ನಾಲ್ವರೂ ಪಕ್ಷೇತರ ಶಾಸಕರು ಆಡಳಿತಪಕ್ಷಕ್ಕೆ ಮತ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಬ್ಬ ಅಭ್ಯರ್ಥಿ ಗೆಲ್ಲಲು ೪೫ ಮತಗಳ ಅಗತ್ಯವಿದೆ. ಇತ್ತ ಬಿಜೆಪಿ ಹಾಗೂ ಜೆಡಿಎಸ್‌ನ ಕೆಲವು ಶಾಸಕರು ಸ್ವಪಕ್ಷೀಯ ಅಭ್ಯರ್ಥಿಗೆ ವಿರುದ್ಧವಾಗಿ ಮತಚಲಾಯಿಸುವ ಶಂಕೆ ವ್ಯಕ್ತವಾಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಶಾಸಕರಿಂದ ಅಡ್ಡಮತದಾನ ಮಾಡಿಸುವ ಗಂಭೀರ ಪ್ರಯತ್ನವೂ ನಡೆದಿದೆ ಎಂದು ಹೇಳಲಾಗುತ್ತಿದೆ.
ಶಾಸಕರಿಗೆ ಹೋಟೆಲ್ ವಾಸ್ತವ್ಯ: ಈ ವಿದ್ಯಮಾನಗಳ ಕಾರಣಕ್ಕೆ ಮೂರೂ ಪಕ್ಷಗಳು ತಂತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಎಲ್ಲ ಶಾಸಕರಿಗೂ ಆಹ್ವಾನ ನೀಡಿದ್ದು ಸಂಜೆ ಅಲ್ಲಿಯೇ ಶಾಸಕಾಂಗ ಸಭೆ ನಡೆಸುವ ಮೂಲಕ ಮತಭದ್ರತೆ ಮಾಡಿಕೊಳ್ಳಲಿದೆ. ಅಲ್ಲದೆ ಅಲ್ಲಿಂದಲೇ ಬಸ್‌ನಲ್ಲಿ ಎಲ್ಲ ಶಾಸಕರನ್ನು ಒಟ್ಟಾಗಿ ವಿಧಾನಸೌಧಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗಿದೆ. ಇತ್ತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಎಲ್ಲ ಶಾಸಕರು ಹೋಟೆಲ್‌ಗೆ ಬರುವಂತೆ ಬುಲಾವ್ ನೀಡಿದ್ದು, ಅಡ್ಡಮತದಾನಕ್ಕೆ ಅವಕಾಶವಾಗದಂತೆ ಎಚ್ಚರಿಕೆ ವಹಿಸಲು ಮುಂದಾಗಿದ್ದಾರೆ.
ಮತದಾನ ಎಲ್ಲಿ? ಹೇಗೆ?: ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ ೧೦೬ರಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಮತದಾನ ನಡೆಯಲಿದೆ.
ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖುದ್ದು ಮಾತುಕತೆ ನಡೆಸಿದ್ದು, ಪಕ್ಷೇತರರ ಜೊತೆ ಕಾಂಗ್ರೆಸ್‌ನಿಂದಲೂ ಮತಸೆಳೆಯುವ ಕಸರತ್ತು ನಡೆಸಿದ್ದಾರೆ. ಮೂರೂ ಪಕ್ಷಗಳು ತಮ್ಮ ಶಾಸಕರಿಗೆ ವಿಪ್ ಜಾರಿಗೊಳಿಸಿವೆ. ಹಂಚಿಕೆಯಾದ ಅಭ್ಯರ್ಥಿಯ ಪರವಾಗಿ ಹಕ್ಕು ಚಲಾಯಿಸುವಂತೆಯೂ ಸೂಚನೆ ನೀಡಲಾಗಿದೆ.
ಕಣದಲ್ಲಿರುವ ಅಭ್ಯರ್ಥಿಗಳು: ಕಾಂಗ್ರೆಸ್‌ನಿಂದ ಅಜಯ್ ಮಾಕನ್, ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ.ಚಂದ್ರಶೇಖರ್. ಬಿಜೆಪಿಯಿಂದ ನಾರಾಯಣ ಬಾಂಡಗೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ
ಕಾಂಗ್ರೆಸ್‌ನತ್ತ ವಾಲಿದ ಜನಾರ್ದನರೆಡ್ಡಿ
ಅಚ್ಚರಿ ಬೆಳವಣಿಗೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಜಿ.ಜನಾರ್ದನರೆಡ್ಡಿ ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಖುದ್ದು ಭೇಟಿಯಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಈ ಭೇಟಿ ಪೌರೋಹಿತ್ಯ ವಹಿಸಿದ್ದರು. ಕಾಂಗ್ರೆಸ್‌ಗೆ ಮತಹಾಕಲ್ಲ ಎಂದು ಹಿಂದೆ ಹೇಳಿದ್ದರೂ ಇಂದಿನ ಮಾತುಕತೆ ಕೈ ಅಭ್ಯರ್ಥಿ ಪರ ಮತಹಾಕುವ ಗ್ಯಾರಂಟಿ ಸಿಕ್ಕಿದೆ ಎಂದೇ ಹೇಳಲಾಗುತ್ತಿದೆ. ಆದರೆ ರೆಡ್ಡಿ ಆನೆಗೊಂದಿ ಉತ್ಸವಕ್ಕೆ ಆಹ್ವಾನಿಸಲು ಈ ಭೇಟಿ ಎಂದಿದ್ದರೂ ರಾಜಕೀಯವಾಗಿ ನಿರ್ಣಾಯಕ ನಿರ್ಧಾರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Next Article