ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ
ಭಯಾನಕ ಭೂ ಕುಸಿತದಿಂದ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದೆ
ಸಕಲೇಶಪುರ: ತಾಲ್ಲೂಕಿನ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿ ಅವಾಂತರ ಸೃಷ್ಟಿಯಾಗಿದೆ.
ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಭಯಾನಕ ಭೂ ಕುಸಿತವಾಗಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್ ಮಧ್ಯೆ ಸಂಭವಿಸಿದೆ. ದಾರಿಗಳೇ ಜಲಾವೃತವಾಗಿ ಜನರ ಆತಂಕ ಹೆಚ್ಚಾಗಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ಮಳೆಗೆ ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಮುಳುಗಡೆ ಹಿನ್ನೆಲೆ ಕೆಲ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುತ್ತಿದ್ದಾರೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು.