ರಾಗಿ ಮಾಲ್ಟ್‌ಗೆ ಇಂದಿನಿಂದ ಚಾಲನೆ
01:00 AM Feb 22, 2024 IST | Samyukta Karnataka
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ಮಿಶ್ರಿತ ಹಾಲು ನೀಡುವ ಯೋಜನೆಗೆ ಇಂದು (ಫೆ.೨೨) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ. ಇನ್ನು ಮುಂದೆ ವಾರದಲ್ಲಿ ಮೂರು ದಿನ ಹಾಲಿನ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನ ಹಾಲನ್ನು ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ. ನಿತ್ಯ ೬೦ ಲಕ್ಷದಂತೆ ವಾರಕ್ಕೆ ೧.೮೦ ಕೋಟಿ ಮಕ್ಕಳು ಈ ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.