For the best experience, open
https://m.samyuktakarnataka.in
on your mobile browser.

ರಾಜಕಾರಣಕ್ಕಾಗಿ ರೈತರ ಭೂಮಿಯನ್ನೇ ಕಸಿದುಕೊಳ್ಳಲು ಸಂಚು

05:02 PM Oct 26, 2024 IST | Samyukta Karnataka
ರಾಜಕಾರಣಕ್ಕಾಗಿ ರೈತರ ಭೂಮಿಯನ್ನೇ ಕಸಿದುಕೊಳ್ಳಲು ಸಂಚು

ಬೆಂಗಳೂರು: "ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೆ ನಿಂತಿದೆ ಧರ್ಮ" ಎಂಬ ರಾಷ್ಟ್ರಕವಿ ಕುವೆಂಪು ಅವರ ಸಾಲುಗಳನ್ನು ಭ್ರಷ್ಟಾಚಾರದಲ್ಲಿ ತೊಡಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಮರೆತಿರುವುದು ವಿಜಯಪುರ ಜಿಲ್ಲೆಯ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಷಡ್ಯಂತ್ರದ ಮೂಲಕ ಬಯಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ತಲತಲಾಂತರ ಕಾಲದಿಂದಲೂ ಕೃಷಿ, ಚಟುವಟಿಕೆಗಳನ್ನು ಮಾಡಿಕೊಂಡು ಬಂದಿರುವ ವಿಜಯಪುರದ ನೂರಾರು ರೈತ ಕುಟುಂಬಗಳಿಗೆ ತರಾತುರಿಯಲ್ಲಿ ನೋಟಿಸ್ ನೀಡಿ ಕೆಲವೊಂದು ದಾಖಲೆಗಳಲ್ಲಿ, ವಕ್ಫ್ ಬೋರ್ಡ್ ಕರ್ನಾಟಕ ಸರ್ಕಾರದ ಅನ್ವಯ ಎಂದು ನಮೂದಿಸಿ ಅಧಿಕಾರಿಗಳ ಮೂಲಕ ನೋಟಿಸ್ ನೀಡಿರುವ ಸರ್ಕಾರದ ಕ್ರಮ ರೈತ ವಿರೋಧಿ ನಿಲುವಿಗೆ ಸ್ಪಷ್ಟ ನಿದರ್ಶನವಾಗಿದೆ.
ವಕ್ಫ್ ಕಾಯ್ದೆ ಹೆಸರಿನಲ್ಲಿ ಕಾನೂನು ಪ್ರಕಾರವೇ ಲೂಟಿಗೆ ಇಳಿಯುವ ಶಾಸನಬದ್ಧ ಅಧಿಕಾರವನ್ನು ಕಾಂಗ್ರೆಸ್ ಒದಗಿಸಿದ್ದೇ ಈ ರೀತಿಯ ಗೊಂದಲಗಳಿಗೆ ಮೂಲ ಕಾರಣವಾಗಿದ್ದು, ಈ ಐತಿಹಾಸಿಕ ಪ್ರಮಾದವನ್ನು ಸರಿಪಡಿಸುವ ನಿಟ್ಟಿನಲ್ಲಿ ನಮ್ಮ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಶೀಘ್ರವೇ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದೆ. ವಕ್ಫ್ ಕಾಯ್ದೆ ಮೂಲಕ ಬಹುಸಂಖ್ಯಾತ ಹಿಂದೂಗಳಿಗೆ ಕಾಂಗ್ರೆಸ್ ಸರ್ಕಾರ ಎಸಗುತ್ತಿರುವ ಮೋಸ, ಅನ್ಯಾಯಗಳು ಗುಟ್ಟಾಗಿ ಉಳಿದಿಲ್ಲ, ಆತುರದ ಹಿಂದೂ ವಿರೋಧಿ ಹಾಗೂ ರೈತ ವಿರೋಧಿ ಕ್ರಮಗಳನ್ನು ಈ ಕೂಡಲೇ ನಿಲ್ಲಿಸದಿದ್ದರೆ ಬಿಜೆಪಿ ನ್ಯಾಯಕ್ಕಾಗಿ ಹೋರಾಟಕ್ಕಿಳಿಯಲಿದೆ. ನಮ್ಮ ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಲು ಶ್ರಮಿಸುತ್ತಿದೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಓಲೈಕೆಯ ರಾಜಕಾರಣಕ್ಕಾಗಿ ರೈತರ ಭೂಮಿಯನ್ನೇ ಕಸಿದುಕೊಳ್ಳಲು ಸಂಚು ಹಾಕುತ್ತಿರುವುದು ದುರಂತದ ದೌರ್ಭಾಗ್ಯವೇ ಸರಿ.

Tags :