ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ

03:19 PM Apr 16, 2024 IST | Samyukta Karnataka

ಹಾವೇರಿ: ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಸಲಹೆ ಕೊಡುವಷ್ಟು ಸಿಎಂ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ. ಬೊಮ್ಮಾಯಿ ಹೇಳಿದ್ದಾರೆ.
ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮಾಜಿ ಪ್ರಧಾನಿ ದೇವೇಗೌಡರು ನಡೆಸುತ್ತಿರುವ ಸಭೆಗೆ ನುಗ್ಗಿ ದಾಂಧಲೆ ನಡೆಸಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ವ್ಯಕ್ತ ಮಾಡಲು ನಮಗೆ ಅವಕಾಶ ಇದೆ. ಅದನ್ನು ಬಿಟ್ಟು ಮಾಜಿ ಪ್ರಧಾನಿ ಕನ್ನಡಿಗರ ಹೆಮ್ಮೆಯ ದೇವೇಗೌಡರ ಸಭೆಯಲ್ಲಿ ಆ ರೀತಿ ದಾಂಧಲೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ. ಜನರು ಎಲ್ಲವನ್ನೂ ನೋಡುತ್ತಾರೆ. ವಿಶೇಷವಾಗಿ ದೇವೇಗೌಡರು ಕನ್ನಡದ ಸಲುವಾಗಿ ಕನ್ನಡಿಗರಿಗಾಗಿ ಪಕ್ಷ ಬೇಧ ಮರೆತು ಹೋರಾಟ ಮಾಡಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಕಾಂಗ್ರೆಸ್ ನ ಅನೇಕ ನಾಯಕರು ಮಹಿಳೆಯರ ಬಗ್ಗೆ ಸಾಕಷ್ಟು ಅವಮಾನಕಾರಕ ಹೇಳಿಕೆಗಳನ್ನು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾದಿ ರಣದೀಪ್ ಸಿಂಗ್ ಸುರ್ಜೆವಾಲ ಮಹಿಳೆಯ ಬಗ್ಗೆ ಆಡಿರುವ ಮಾತಿಗೆ ಕಾಂಗ್ರೆಸ್ ನವರು ಸ್ಪಷ್ಟೀಕರಣ ನೀಡಲಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಾಂಗ್ರೆಸ್ ನವರು ಅದನ್ನು ತಡೆಯುವ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದರು.
ಮಾಜಿ ಪ್ರಧಾನಿ ದೇವೇಗೌಡರ ಕುರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ದೇವೇಗೌಡರಿಗೆ ಬುದ್ದಿ ಹೇಳುವಷ್ಡು ದೊಡ್ಡವರು ಯಾರೂ ಇಲ್ಲ. ಅವರಿಗೆ ಸಲಹೆ ನಿಡುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಿಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣ ಆಗಲಿದೆ ಎಂದು ಇದೆ ವೇಳೆ ಹೇಳಿದರು.

Next Article