ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜಕೀಯ ತೀರ್ಮಾನ ವಾರದಲ್ಲಿ ನಿರ್ಧಾರ

05:44 PM Mar 04, 2024 IST | Samyukta Karnataka

ಚಿಕ್ಕಮಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಚರ್ಚಿಸಿ ಮುಂದಿನ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಚಿಕ್ಕಮಗಳೂರು ಜನತೆಯೊಂದಿಗೆ ಸಂಪರ್ಕದಲ್ಲಿದ್ದೇನೆ ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಚರ್ಚೆ ಮಾಡಿದ ಬಳಿಕ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಜಾತಿ ಗಣತಿ ವರದಿ ಸಂಬಂಧ ಪ್ರತಿಕ್ರಿಯಿಸಿದ ಅವರು, ವರದಿಯನ್ನು ಸರ್ಕಾರಕ್ಕೆ ನೀಡಬಹುದು ಬಿಟ್ಟರೇ ವರದಿಯಲ್ಲಿ ಯಾವ ಅಂಶಗಳಿವೆ ಎಂದು ಹೇಳಲು ಸಾಧ್ಯವಿಲ್ಲ. ವರದಿಯನ್ನು ಯಾರು ಓದೆ ಇಲ್ಲ ಆಗಲೇ ಅವೈಜ್ಞಾನಿಕವಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ಓದದೆ ಚರ್ಚೆಯಾಗುತ್ತಿರುವುದು ಯಾಕೆಂದು ಗೊತ್ತಾಗುತ್ತಿಲ್ಲ ಎಂದರು.

ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಮೇಲೆ ಅದರ ಬಗ್ಗೆ ಚರ್ಚೆಯಾಗಲಿ ಎಂದ ಅವರು, ವರದಿ ನೀಡಲು ಸಾಕಷ್ಟು ಶ್ರಮವಹಿಸಿದ್ದೇವೆ. ಈ ಹಿಂದೆ ಕಾಂತರಾಜ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಕಂದಾಯ ಅಧಿಕಾರಿಗಳು ಮತ್ತು ಶಿಕ್ಷಕರು ಸಮೀಕ್ಷೆ ಮಾಡಿದ್ದಾರೆ ಎಂದು ತಿಳಿಸಿದರು.

ಯಾರು ಮನೆಯಲ್ಲಿ ಕುಳಿತು ಬರೆದಿದ್ದಲ್ಲ. ಶಿಕ್ಷಕರು ಮಾಡಿರುವ ಸಮೀಕ್ಷೆ. ಅವರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿ ದ್ದಾರೆ. ಅದರ ಆಧಾರದ ಮೇಲೆ ಸಮೀಕ್ಷೆ ದತ್ತಾಂಶದ ಆಧಾರದ ಮೇಲೆ ನಾವು ವರದಿ ಮಾಡಿದ್ದೇವೆ. ವರದಿ ಮಾಡುವಾಗ ಪ್ರತಿಯೊಂದು ಜಾತಿಗೂ ಪ್ರಮುಖ್ಯತೆ ನೀಡಲಾಗಿದೆ. ಯಾರು ಹಿಂದೂಳಿದವರು, ಅತೀ ಹಿಂದೂಳಿದವರು ಅತ್ಯಂತ ಹಿಂದೂಳಿದವರು ಅವರಿಗೆ ಎಷ್ಟು ಮೀಸಲಾತಿ ನೀಡಬೇಕು ಎಂಬುದನ್ನು ತೀರ್ಮಾನ ಮಾಡಿ ವರದಿಯನ್ನು ನೀಡಿದ್ದೇವೆ ಎಂದರು.

ಸಚಿವ ಸಂಪುಟದ ವರದಿ ಸರಿ ಇದೆಯೇ ಇಲ್ಲವೇ ಎಂಬುದನ್ನು ತೀರ್ಮಾನ ಮಾಡಲು ಅವಕಾಶವಿದೆ. ಒಂದು ವೇಳೆ ಲೋಪವಿದ್ದರೇ ಬದಲಾವಣೆ ಮಾಡಲು ಅವಕಾಶವಿದೆ. ಸಂಪುಟ ಸಭೆಯಲ್ಲಿ ತೀರ್ಮಾನವಾದ ಬಳಿಕ ಚರ್ಚೆಯಾಗಲಿ ಎಂದು ಅವರು ಹೇಳಿದರು.

Next Article