ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವ ಕೇಂದ್ರ ಸರ್ಕಾರ

01:22 PM Aug 17, 2024 IST | Samyukta Karnataka

ಮುಧೋಳ (ಗ್ರಾ.): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಇಂತಹ ಪಿತೂರಿಗಳನ್ನು ಎದುರಿಸುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷಕ್ಕೆ ಮತ್ತು 136 ಶಾಸಕರನ್ನು ಆಯ್ಕೆ ಮಾಡಿದ ಜನತೆಗೆ ಇದೆ
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ನೀಡದಂತೆ ರಾಜ್ಯದ ಜನರು ಹಾಗೂ ನಾವುಗಳು ಅವರನ್ನು ಬಿಡುವುದಿಲ್ಲ ಎಂದರು

ಈಗಾಗಲೇ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಹೊರಬೀಳುವ ಮುನ್ನವೇ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ.

ಇತರ ರಾಜ್ಯಗಳಲ್ಲಿ ಇದೇ ರೀತಿಯ ಅಧಿಕಾರ ದುರುಪಯೋಗದ ಉದಾಹರಣೆಗಳನ್ನು ಉಲ್ಲೇಖಿಸಿ ಇಡಿ, ಐಟಿ ಮತ್ತು ರಾಜಭವನ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರವನ್ನು ಸಾರಾಸಗಟಾಗಿ ತಿರಸ್ಕರಿಸಿದ ಸಚಿವ ಆರ್ ಬಿ ತಿಮ್ಮಾಪೂರ ಎಂದು ಹೇಳಿದ್ದಾರೆ.

Tags :
#Bjp#cmsiddaramaiah#MUDAScam#samyuktakarnatakacongress
Next Article