ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ…

07:19 PM Jul 31, 2024 IST | Samyukta Karnataka

ಬೆಂಗಳೂರು: ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತೀಳಿಸಿದ್ದಾರೆ.
ಈ ಕುರಿತಂತೆ ಪ್ರಯೋಗಾಲಯವು ನೀಡಿದ ಫಲಿತಾಂಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು. ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ ಎಂದಿದ್ದಾರೆ.

Next Article