For the best experience, open
https://m.samyuktakarnataka.in
on your mobile browser.

ರಾಜ್ಯಕ್ಕೆ ಇಂದು ರಾಹುಲ್‌ಗಾಂಧಿ

12:13 AM Apr 17, 2024 IST | Samyukta Karnataka
ರಾಜ್ಯಕ್ಕೆ ಇಂದು ರಾಹುಲ್‌ಗಾಂಧಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ತಾರಾಪ್ರಚಾರಕರಾಗಿರುವ ರಾಹುಲ್‌ಗಾಂಧಿ ಲೋಕಸಭಾ ಚುನಾವಣೆ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಬುಧವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸಕ್ಕರೆನಾಡು ಮಂ­ಡ್ಯದಿಂದಲೇ ಪ್ರಚಾ­ರದ ರಣಕಹಳೆ ಮೊಳಗಿ­ಸಲಿದ್ದಾರೆ. ಬುಧವಾರ ಮಧ್ಯಾಹ್ನ ರಾಜ್ಯಕ್ಕೆ ಆಗಮಿಸುವ ಅವರು ಬಳಿಕ ಮಂಡ್ಯಕ್ಕೆ ತೆರಳಿ ಅಲ್ಲಿನ ವಿಶ್ವವಿದ್ಯಾಲಯ ಆವರಣದಲ್ಲಿ ಏರ್ಪಡಿಸಿರುವ ಪ್ರಜಾಧ್ವನಿ-೨ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಪರವಾಗಿ ಪ್ರಚಾರ ನಡೆಸಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳನ್ನು ಒಳಗೊಂಡು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರನ್ನು ಸೇರಿಸಲು ಸಿದ್ಧತೆ ನಡೆದಿದೆ.