For the best experience, open
https://m.samyuktakarnataka.in
on your mobile browser.

ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆ

11:00 AM Sep 12, 2024 IST | Samyukta Karnataka
ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆ

ಬೆಂಗಳೂರು: ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಎಂದು ವಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.
ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ. ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ. ಕರ್ನಾಟಕ ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ. ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಗೃಹ ಸಚಿವ ಪರಮೇಶ್ವರ ಅವರನ್ನ ಒತ್ತಾಯಿಸುತ್ತೇನೆ ಎಂದಿದ್ದಾರೆ.

Tags :