ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ

05:14 PM Jan 21, 2025 IST | Samyukta Karnataka

ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ

ನವದೆಹಲಿ: ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಕೊಬ್ಬರಿ ಮತ್ತು ಅಡಿಕೆ ಬೆಳೆಗಾರರು ಸೇರಿದಂತೆ ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ, ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ. ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಕೃಷಿ ಉತ್ಪನ್ನಗಳ ಸರಪಳಿಯಿಂದ ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಗತ್ಯತೆ ಇದೆ. ಕೃಷಿ ಉತ್ಪನ್ನಗಳ ಮಾರಾಟದಲ್ಲಿ ದಲ್ಲಾಳಿಗಳ ಉಪಟಳ ಮೆರೆ ಮೀರಿದೆ. ಕೇಂದ್ರ ಸರ್ಕಾರದಿಂದ ಎಷ್ಟೇ ಅನುಕೂಲರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ರೈತರ ಸಂಕಷ್ಟ ಬಗೆಹರಿದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ, ಫಲಾನುಭವಿಗಳಿಗೆ ಹಣ ನೇರ ವರ್ಗಾವಣೆ (ಡಿಬಿಟಿ) ಮೂಲಕ ರಸಗೊಬ್ಬರ ಸಬ್ಸಿಡಿಯನ್ನು ಸಕಾಲಕ್ಕೆ ತಲುಪಿಸುವ ಮಹತ್ವದಾಗಿದೆ, ವಿಳಂಬವಿಲ್ಲದೆ ಇತರೆ ಸಹಾಯಧನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಅಧಿಕಾರಶಾಹಿಯ ಅನಗತ್ಯ ಹಸ್ತಕ್ಷೇಪದಿಂದ ಅವರನ್ನು ರಕ್ಷಿಸುವುದು ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಸಹ ಚರ್ಚೆ ನಡೆಸಿದ್ದಾರೆ.

Tags :
#ಕುಮಾರಸ್ವಾಮಿ#ಕೃಷಿ#ನವದೆಹಲಿ#ಶಿವರಾಜ್ ಸಿಂಗ್ ಚೌಹಾಣ್
Next Article