ರಾಜ್ಯದಲ್ಲಿ ನೂತನ ಉದ್ಯಮ: 14,500 ಉದ್ಯೋಗಳ ಸೃಷ್ಟಿ
73ಯೋಜನೆಗಳು | ₹. 3,935 ಕೋಟಿಗೂ ಹೆಚ್ಚಿನ ಬಂಡವಾಳ | 14,500+ ಉದ್ಯೋಗಳ ಸೃಷ್ಟಿ
ಬೆಂಗಳೂರು: 73 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು ಸುಮಾರು 14,500 ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆನಡೆಸಿದೆ. 73 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು ₹ 3,935 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಸುಮಾರು 14,500 ಉದ್ಯೋಗಗಳು ಸೃಷ್ಟಿಯಾಗಲಿದೆ.
ETL ಸೆಕ್ಯೂರ್ ಸ್ಪೇಸ್ ಲಿ., DhaSH ಪಿ.ವಿ. ಟೆಕ್ನಾಲಜಿಸ್ , ಮೈಲಾರ್ ಇನ್ ಫ್ರಾ, ಸೇರಿದಂತೆ ಹಲವು ಕಂಪೆನಿಗಳು ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯಮಗಳು ಸ್ಥಾಪನೆಯಾಗಲಿದೆ. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯವರಾದ ಡಾ. ಸೆಲ್ವಕುಮಾರ್, ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, #KIADB ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಹೇಶ್ ಸೇರಿದಂತೆ ಹಲವು ಅಧಿಕಾರಿಗಳು ಇಂದಿನ ಸಭೆಯಲ್ಲಿ ಉಪಸ್ಥಿತರಿದ್ದರು ಎಂದಿದ್ದಾರೆ.