ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
05:44 PM Jun 15, 2024 IST
|
Samyukta Karnataka
ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಏರಿಕೆ ಮಾಡಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದ್ದು, ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಲೀಟರ್ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಆಗಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
Next Article