For the best experience, open
https://m.samyuktakarnataka.in
on your mobile browser.

ರಾಜ್ಯದಲ್ಲಿ ಸಿಎಎ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತಿರ್ಮಾನ

03:13 PM Mar 13, 2024 IST | Samyukta Karnataka
ರಾಜ್ಯದಲ್ಲಿ ಸಿಎಎ  ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತಿರ್ಮಾನ

ಉಡುಪಿ: ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ. ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು.
ಜಯಪ್ರಕಾಶ್ ಹೆಗಡೆಯವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕಕ್ಕೇ ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ, ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ಬಿಜೆಪಿ ಆರೋಪ ನಿರಾಧಾರ. ಕೇಂದ್ರದ ನಿರ್ದೇಶನ ಅಥವಾ ತಮಿಳುನಾಡು ನಮಗೆ ನೀರು ಕೊಡುವಂತೆ ಮನವಿ ಮಾಡಿದರೂ ನಾವು ನೀರು ಕೊಡುವುದಿಲ್ಲ ಎಂದು ಹೇಳಿದರು.