For the best experience, open
https://m.samyuktakarnataka.in
on your mobile browser.

ರಾಜ್ಯದಲ್ಲಿ HMPV ವೈರಸ್: ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ

03:31 PM Jan 06, 2025 IST | Samyukta Karnataka
ರಾಜ್ಯದಲ್ಲಿ hmpv ವೈರಸ್  ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ

ಚೀನಾದಲ್ಲಿ ಹೆಚ್.ಎಂ.ಪಿ.ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ

ಬೆಂಗಲೂರು: ರಾಜ್ಯದಲ್ಲಿ ಹೆಚ್.ಎಂ.ಪಿ.ವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚೀನಾದಲ್ಲಿ ಹೆಚ್.ಎಂ.ಪಿ.ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ.

Tags :