ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ

03:23 PM Feb 13, 2024 IST | Samyukta Karnataka

ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಹಾಗೂ ವಚನ‌ ವಿವೇಕ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫೆ.17 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ ಅನಾವರಣಗೊಳಿಸಲಾಗುತ್ತದೆ.‌ ಪ್ರತಿ ಭಾವಚಿತ್ರದ‌‌ ಕೆಳಗಡೆ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತ ಬರೆಯುತ್ತೇವೆ. ಬುದ್ಧ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತದೆ. ಇವರು ನಮ್ಮ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದರು. ಸಂಸದೀಯ ವ್ಯವಸ್ಥೆ ಬಸವಣ್ಣವರ ಕಾಲದಲ್ಲೆ ಬಂದಿದೆ. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮನವಾದಿಗಳು ಕೆಲವು ಕೆಟ್ಟ ಸಂಪ್ರದಾಯಗಳನ್ನ ಮಾಡಿಬಿಟ್ಟಿದ್ದರು. ಇದರಿಂದ ಅಸಮಾನತೆ ಹುಟ್ಟು ಹಾಕಿದರು. ಬಸವಣ್ಣನವರು ಈ ಕಂದಚಾರವನ್ನು ಹೊಗಲಾಡಿಸಲು ಶ್ರಮಿಸಿದರು ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣ ಅವರ ಭಾವಚಿತ್ರ: ಕಳೆದ ತಿಂಗಳು ರಾಜ್ಯ ಸರ್ಕಾರ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಅಧಿಕೃತವಾಗಿ ಘೋಷಣೆ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಸರ್ಕಾರ ಕಚೇರಿಗಳಲ್ಲಿ ಬಸವಣ್ಣ ಅವರ ಭಾವಚಿತ್ರ ಹಾಕುವುದು ಕಡ್ಡಾಯಗೊಳಿಸಲಾಗಿದೆ.

Next Article