ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದ ಜನತೆಗೆ ಮತ್ತೊಂದು ಗ್ಯಾರಂಟಿ

08:02 PM Jan 24, 2025 IST | Samyukta Karnataka

ಕೋಲಾರ: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯದ್ಯಂತ ವಿಸ್ತರಣೆ ಮಾಡಲು ಸಿದ್ಧವಾಗಿದೆ. ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು(NCD) ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ನಗರದ ಎಸ್‌ಎನ್‌ಆರ್ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗೃಹ ಆರೋಗ್ಯ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯಲ್ಲಿ ಅಕ್ಟೊಬರ್ 29ರಂದು ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಈ ಯೋಜನೆಯ ಸಾಧಕ ಭಾದಕಗಳನ್ನು ಪರಿಶೀಲನೆ ನಡೆಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಜಾರಿಗೆ ತರಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ, ರಾಜ್ಯದ ಜನಸಂಖ್ಯೆಯ ಶೇ 26.9ಕ್ಕೂ ಅಧಿಕ ಮಂದಿ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಮತ್ತು ಶೇ 15.6 ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಶೇ 11.5 ನಿವಾಸಿಗಳು ಬಾಯಿಯ ಕ್ಯಾನ್ಸರ್‌ನಿಂದ ಶೇ 26ರಷ್ಟು ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಮತ್ತು 18.3% ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.
ಈ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು, ಗೃಹ ಆರೋಗ್ಯ ಯೋಜನೆಯ ಭಾಗವಾಗಿ ನಮೂನೆಗಳನ್ನು ಸಿದ್ಧಪಡಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಮನೆಗೆ ಭೇಟಿ ನೀಡಲು ಕಳುಹಿಸಲಾಗುತ್ತದೆ ಎಂದು ಹೇಳಿದರು.
ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಸಿಬ್ಬಂದಿ 30 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳ ರಕ್ತದೊತ್ತಡ ಮತ್ತು ಮಧುಮೇಹದ ಮಟ್ಟವನ್ನು ಪರಿಶೀಲಿಸುತ್ತಾರೆ. ಈ ಭೇಟಿ ಸಮಯದಲ್ಲಿ ಮೌಖಿಕ, ಗರ್ಭಕಂಠದ ಮತ್ತು ಸ್ತನ ಕ್ಯಾನ್ಸರ್‌ಗಳ ಮೌಲ್ಯಮಾಪನಗಳನ್ನು ಸಹ ಒಳಗೊಂಡಿದೆ.
ಆರೋಗ್ಯ ಅಧಿಕಾರಿಗಳು ಎನ್‌ಸಿಡಿಗಳನ್ನು ತಡೆಗಟ್ಟಲು ಅಗತ್ಯ ಜೀವನಶೈಲಿಯ ಬದಲಾವಣೆಗಳ ಬಗ್ಗೆ ಸಲಹೆ ನೀಡುತ್ತಾರೆ. ರೋಗಗಳು ದೃಢಪಟ್ಟವರಿಗೆ ಮಾತ್ರೆ ಪಟ್ಟಿಯ ಮೂಲಕ ಅಗತ್ಯ ಔಷಧಿಗಳನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಅಸಾಂಕ್ರಾಮಿಕ ರೋಗಗಳು ಧೃಡಪಟ್ಟವರಿಗೆ ಪ್ರತಿ ಎರಡು ತಿಂಗಳಿಗೊಮ್ಮೆ ಅವರ ಮನೆಗಳಿಗೆ ಔಷಧಿಗಳನ್ನು ತಲುಪಿಸಲಾಗುತ್ತಿದೆ ಎಂದರು. ರಾಜ್ಯಾದ್ಯಂತ ಈ ಯೋಜನೆಯ ವಿಸ್ತರಣೆ ಮಾಡಿ ನಮ್ಮ ಸರ್ಕಾರ ಆರನೇ ಗ್ಯಾರೆಂಟಿ ಜಾರಿ ಮಾಡಲಾಗುತ್ತಿದೆ ಎಂದರು.

Next Article