ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದ ಹಿತವನ್ನು ಕಾಪಾಡಲು 7ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

05:24 PM Feb 05, 2024 IST | Samyukta Karnataka

ಬೆಂಗಳೂರು: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 7ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಬೆಳಿಗ್ಗೆ 11ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್‌ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.
ರಾಜ್ಯಕ್ಕೆ ನಿರಂತರ ಅನ್ಯಾಯ
ಭದ್ರಾ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದರು. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದರು.
ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ:
ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ, ಸೆಸ್, ಪೆಟ್ರೋಲ್, ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ.
14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

Next Article