ರಾಜ್ಯ ಕಾಂಗ್ರೆಸ್‌ನಿಂದ ಕೇಂದ್ರದ ಮೇಲೆ ಗೂಬೆ ಕೂಡಿಸುವ ಕೆಲಸ
ಗಜೇಂದ್ರಗಡ: ರಾಜ್ಯದಲ್ಲಿ ಬರಗಾಲ ಬಂದರೆ ಪರಿಹಾರ ಕೊಡಲಿಲ್ಲ, ರೈತರಿಗೆ ಏನೂ ಕೊಡಲಿಲ್ಲ, ರಸ್ತೆ ದುರಸ್ತಿ ಮಾಡಲು ಸಹ ಹಣ ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕರ್ತರಿಗೆ, ಮತದಾರರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಬರಗಾಲ ಬಂದರೆ ಪರಿಹಾರ ಕೊಡದ ರೈತರಿಗೆ ಏನೂ ಕೊಡದ, ರಸ್ತೆ ದುರಸ್ತಿ ಮಾಡಲು ಸಹ ಹಣವಿಲ್ಲದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸದ ಭಾಗವಾಗಿ ಬಜೆಟ್‌ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಎಂದು ಆರೋಪಿಸುತ್ತಿದೆ. ಆದರೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯ ರೈಲ್ವೆಗೆ ೭೩೨೯ ಸಾವಿರ ಕೋಟಿ, ಬಂಡವಾಳ ಹೂಡಿಕೆಗೆ ೬,೨೮೦ ಸಾವಿರ ಕೋಟಿ ಸೇರಿ ಹಲವಾರು ವಿಭಾಗಗಳಲ್ಲಿ ಬಜೆಟ್‌ನಲ್ಲಿ ಆಧ್ಯತೆ ನೀಡಿದೆ ಎಂದ ಅವರು, ಒಕ್ಕಲುತನವೇ ಪ್ರಧಾನವಾಗಿರುವ ರೋಣ ಮತಕೇತ್ರದಲ್ಲಿ ಪ್ರಧಾನಮಂತ್ರಿ ಗ್ರಾಮ್ ಸಡಕ್ ಮೂಲಕ ರಸ್ತೆಗಳ ನಿರ್ಮಾಣ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸುವೆ. ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿಗೆ ಮೊದಲ ಪ್ರಾಶಸ್ತ್ಯ ನೀಡುತ್ತಿದ್ದು ಮತಕೇತ್ರವು ಭಾಗಶಃ ರಾಷ್ಟ್ರೀಯ ಹೈವೆಗೆ ಒಳಪಡಲಿದೆ. ಧಾರವಾಡ-ಕಲ್ಬುರ್ಗಿ ಡಿಪಿಆರ್ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಾಣದ ಪಟ್ಟಿಗೆ ಸೇರಿಸುವ ಕೆಲಸವನ್ನು ಮಾಡುತ್ತೇನೆ ಎಂದರು.