ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ಸಾಂಗ್ಲಿವರೆಗೆ ವಿಸ್ತರಣೆ

02:05 PM Mar 13, 2024 IST | Samyukta Karnataka

ಹುಬ್ಬಳ್ಳಿ : ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮಹಾರಾಷ್ಟ್ರದ ಮಿರಜ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲನ್ನು ಸಾಂಗ್ಲಿ ನಿಲ್ದಾಣವರೆಗೆ ವಿಸ್ತರಿಸಲು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ಈ ನಿರ್ಧಾರ ಕೈಗೊಂಡ ಪರಿಣಾಮ ಪ್ರಮುಖ ನಗರಗಳ ಸಂಪರ್ಕ ಹೆಚ್ಚಿಸುವ ಮತ್ತು ಆ ಪ್ರದೇಶದ ಜನರಿಗೆ ಪ್ರಯಾಣ ಮತ್ತಷ್ಟು ಸುಲಭಗೊಳಿಸುವ ಮೂಲಕ ಅವರ ಬೇಡಿಕೆಗೆ ಸ್ಪಂದಿಸುವಂತಾಗಲಿದೆ ಎಂದು ಹೇಳಿದೆ. ಮಾರ್ಚ್ 12, 2024 ರಿಂದ ರೈಲು ಸಂಖ್ಯೆ 16589 ಕೆ.ಎಸ್.ಆರ್ ಬೆಂಗಳೂರು-ಸಾಂಗ್ಲಿ ರಾಣಿ ಚೆನ್ನಮ್ಮ ಡೈಲಿ ಎಕ್ಸ್ ಪ್ರೆಸ್ ರೈಲು ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ರಾತ್ರಿ 11:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:50 ಘಂಟೆಗೆ ಸಾಂಗ್ಲಿ ನಿಲ್ದಾಣವನ್ನು ತಲುಪಲಿದೆ. ಮಿರಜ್ ನಿಲ್ದಾಣಕ್ಕೆ ಈ ರೈಲು ಮಧ್ಯಾಹ್ನ 12:25/12:30 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
ಅದೇ ರೀತಿ ಮಾರ್ಚ್ 13, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16590 ಸಾಂಗ್ಲಿ-ಕೆ.ಎಸ್.ಆರ್ ಬೆಂಗಳೂರು ರಾಣಿ ಚೆನ್ನಮ್ಮ ಡೈಲಿ ಎಕ್ಸ್ ಪ್ರೆಸ್ ರೈಲು ಸಾಂಗ್ಲಿ ನಿಲ್ದಾಣದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 6:20 ಘಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ. ಮಿರಜ್ ನಿಲ್ದಾಣಕ್ಕೆ ಈ ರೈಲು ಮಧ್ಯಾಹ್ನ 03:15/03:35 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ ಎಂದು ತಿಳಿಸಿದೆ.
ಪ್ರಯಾಣಿಕರು ಈ ರೈಲು ವಿಸ್ತರಣೆಯ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ನೈಋತ್ಯ ರೈಲ್ವೆ ವಲಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ಕೋರಿದ್ದಾರೆ.

Next Article