"ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ"
ಬೆಂಗಳೂರು: ಹಿಂದೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ರಾಮವಿರೋಧಿ ನಿಲುವುಗಳನ್ನು ಕೈಬಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿರುವ ಅವರು ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಭಕ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭವ್ಯ ಶ್ರೀರಾಮ ಮಂದಿರ ತಲೆಯೆತ್ತಿರುವುದನ್ನು ಸಹಿಸದೆ, ಓಲೈಕೆ ರಾಜಕಾರಣಕ್ಕೆ ಕಟಿಬಿದ್ದು ಹಿಂದೂ ಕಾರ್ಯಕರ್ತರು ಹಾಗೂ ರಾಮಭಕ್ತರನ್ನು ಜೈಲಿಗಟ್ಟುವ ಹುನ್ನಾರ ನಡೆಸಲು ರೂಪಿಸಿರುವ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವನ್ನು ಖಂಡಿಸಿ, ತಕ್ಷಣ ಹಿಂದೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ರಾಮವಿರೋಧಿ ನಿಲುವುಗಳನ್ನು ಕೈಬಿಡುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದ ಗೌಡ, ಸಂಸದ ಪಿ.ಸಿ ಮೋಹನ್, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರು ಸೇರಿದಂತೆ ಬೆಂಗಳೂರಿನ ಎಲ್ಲಾ ಶಾಸಕರುಗಳು, ರಾಜ್ಯ ಉಪಾಧ್ಯಕ್ಷರುಗಳು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಶ್ರೀರಾಮ ಭಕ್ತರು ಭಾಗವಹಿಸಿದ್ದರು.