ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಮಲಲ್ಲಾ ದರ್ಶನಕ್ಕಾಗಿ ನೂಕುನುಗ್ಗಲು

04:34 PM Jan 23, 2024 IST | Samyukta Karnataka

ಅಯೋಧ್ಯೆ: ರಾಮಲಲ್ಲಾ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಅಯೋಧ್ಯೆಗೆ ತೆರಳಿದ್ದು, ಇಂದು ದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಹಲವಾರು ಭಕ್ತರು ಗಾಯಗೊಂಡಿದ್ದಾರೆ.
ಮಧ್ಯಾಹ್ನ ಎರಡನೇ ಅವಧಿಯ ದರ್ಶನದ ಸಂದರ್ಭದಲ್ಲಿ ತಳ್ಳಾಟ ಹಾಗೂ ಕಾಲ್ತುಳಿತ ಉಂಟಾಗಿದೆ. ಅದರಲ್ಲೂ ಕೆಲ ಭಕ್ತರು ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ನ್ನು ತಳ್ಳಿದ್ದಾರೆ. ಈ ವೇಳೆ ಅನೇಕರು ಕೆಳಗೆ ಬಿದ್ದಿದ್ದು ಹಲವರು ಗಾಯಗೊಂಡಿದ್ದಾರೆ. ನೂಕನುಗ್ಗಲು ಉಂಟಾದ ಕಾರಣ ಮಂದಿರದ ಬಳಿ ಮತ್ತಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಬೆಳಗ್ಗೆ 7 ಗಂಟೆಯಿಂದ 11.30 ಹಾಗೂ ಮಧ್ಯಾಹ್ನ 2 ಗಂಟೆಯಿಂದ 7 ಗಂಟೆವರೆಗೆ ರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Next Article