For the best experience, open
https://m.samyuktakarnataka.in
on your mobile browser.

ರಾಮ ಮಂದಿರ ಉದ್ಘಾಟನೆಯಂದು ರಜೆ ಘೋಷಿಸಿ

09:20 PM Jan 17, 2024 IST | Samyukta Karnataka
ರಾಮ ಮಂದಿರ ಉದ್ಘಾಟನೆಯಂದು ರಜೆ ಘೋಷಿಸಿ

ಗೋಕಾಕ: ಅಯೋಧ್ಯೆಯಲ್ಲಿ ಜ. ೨೨ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಾಚರಣೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅನುಕೂಲವಾಗುವಂತೆ ಸರ್ಕಾರ ರಜೆ ಘೋಷಿಸಬೇಕೆಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಒತ್ತಾಯಿಸಿದ್ದಾರೆ.
ಗೋಕಾಕ ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ, ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನಿಮಿತ್ತ ಕ್ಷೇತ್ರದಲ್ಲಿ ಆಚರಿಸುವ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆಗೆ ಶ್ರೀ ರಾಮನ ಆದರ್ಶಗಳು ಮಾರ್ಗದರ್ಶನವಾಗಿ ಅವುಗಳ ಆಚರಣೆಯೊಂದಿಗೆ ಅವರ ಭವಿಷ್ಯವು ಉಜ್ವಲವಾಗುತ್ತದೆ. ಅದಕ್ಕಾಗಿ ಈ ಸತ್ಕಾರ್ಯದಲ್ಲಿ ಅವರಿಗೂ ಅವಕಾಶ ಕಲ್ಪಿಸುವಂತೆ ಸರಕಾರವನ್ನು ಕೋರಿದರು.