ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಯರಡ್ಡಿ ಸಮಾಧಾನ ಪಡಿಸಿದ ಸಿಎಂ ಸಿದ್ದು

10:48 PM Dec 29, 2023 IST | Samyukta Karnataka

ಕೊಪ್ಪಳ: ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೆಂಕಿ ಉಗುಳುತ್ತಿದ್ದ ಯಲಬುರ್ಗಾದ ಹಿರಿಯ ಶಾಸಕ ಬಸವರಾಜ್ ರಾಯರಡ್ಡಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸುವ ಮೂಲಕ ಸರ್ಕಾರ ಸಮಾಧಾನ ಪಡಿಸಿದೆ.
ಮಾಜಿ ಸಚಿವರಾದ ಬಸವರಾಜ್ ರಾಯರಡ್ಡಿ ಜಿಲ್ಲೆಯ ಮಟ್ಟಿಗೆ ಹಿರಿಯ ಮತ್ತು ರಾಜಕೀಯ ಅನುಭವ ಹೊಂದಿದ್ದಾರೆ. ಈ ಬಾರಿಯೂ ಸಚಿವ ಸ್ಥಾನ ಸಿಕ್ಕೇ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಸಿದ್ದರಾಮಯ್ಯ ಸಿಎಂ ಇರುವಾಗಲೇ ರಾಯರಡ್ಡಿಗೆ ಕೈತಪ್ಪಿರುವುದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಅಚ್ಚರಿ ಮೂಡಿಸಿತ್ತು.
ಜಿಲ್ಲೆಯ ಕನಕಗಿರಿ ಶಾಸಕ ಶಿವರಾಜ್ ತಂಗಡಗಿಗೆ ಸಚಿವ ಸ್ಥಾನ ಒಲಿದಿದ್ದು, ಇದರಿಂದಾಗಿ ಹಿರಿಯ ಶಾಸಕ ರಾಯರಡ್ಡಿ ಅಸಮಾಧಾನಗೊಂಡಿದ್ದಲ್ಲದೇ ಶಾಸಕರ ಕೆಲಸಗಳು ಆಗುತ್ತಿಲ್ಲ. ಸಚಿವರು ಶಾಸಕರಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಶಾಸಕಾಂಗ ಸಭೆ ನಡೆಸುವಂತೆ ೨೦ ಶಾಸಕರ ಸಹಿ ಮಾಡಿದ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದರು. ಇದಾದ ಮೇಲೆ ಸಿದ್ದರಾಮಯ್ಯನವರೂ ಶಾಸಕಾಂಗ ಸಭೆ ನಡೆಸಿದರು. ಅಲ್ಲದೇ ನನಗೆ ಪ್ರಸ್ತುತ ಚುನಾವಣೆಗಳು ಹಾಗೂ ರಾಜಕೀಯ ನೋವು ತರಿಸಿದೆ. ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ರಾಯರಡ್ಡಿ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕಾಗಿಯೇ ಸಮಾಧಾನ ಪಡಿಸಲು ಮುಖ್ಯಮಂತ್ರಿಗಳು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.
ರಾಮಕೃಷ್ಣ ಹೆಗಡೆಯವರ ಅವಧಿಯಲ್ಲಿ ವಸತಿ ಖಾತೆ ಹಾಗೂ ಕಳೆದ ಬಾರಿಯ ಸಿದ್ದರಾಮಯ್ಯ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಬಸವರಾಜ್ ರಾಯರಡ್ಡಿ ಕಾರ್ಯನಿರ್ವಹಿಸಿದ್ದರು. ರಾಜ್ಯದ ಅನುದಾನದ ಲೆಕ್ಕಚಾರಕ್ಕೆ ಸಂಬಂಧಿಸಿದಂತೆ ಅಪಾರ ಜ್ಞಾನ ಹೊಂದಿದ್ದಾರೆ. ಆಯವ್ಯಯ ಮಂಡನೆ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಸೂಕ್ತ ಸಲಹೆ-ಸೂಚನೆಗಳನ್ನು ರಾಯರಡ್ಡಿ ನೀಡುತ್ತಲೇ ಬಂದಿದ್ದಾರೆ. ಹಾಗಾಗಿ ಸದ್ಯ ಸಿಎಂ ಆರ್ಥಿಕ ಸಲಹೆಗಾರರಾಗಿ ಸಂಪುಟ ದರ್ಜೆಯ ಸ್ಥಾನ ಮಾನ ಪಡೆದಿರುವುದು ರಾಯರಡ್ಡಿ ರಾಯಕೀಯ ಶಕ್ತಿ ಪ್ರದರ್ಶನದ ಪ್ರತಿರೂಪ ಎನ್ನುವಂತಾಗಿದೆ.

Next Article