ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ
11:24 AM May 03, 2024 IST
|
Samyukta Karnataka
ರಾಯ್ ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಸ್ಪರ್ಧೆ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಹಾಗೂ ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಹುಲ್ ಗಾಂಧಿ 2004 ರಿಂದ 2019 ರವರೆಗೆ ಸಂಸತ್ತಿನ ಕೆಳಮನೆಯಲ್ಲಿ ಅಮೇಥಿಯನ್ನು ಪ್ರತಿನಿಧಿಸಿದ್ದರು. ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ 2004 ರಿಂದ 2024 ರವರೆಗೆ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
Next Article