For the best experience, open
https://m.samyuktakarnataka.in
on your mobile browser.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ

01:11 PM Jan 17, 2025 IST | Samyukta Karnataka
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ

ನವದೆಹಲಿ: ಡಬಲ್ ಒಲಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಸೇರಿದಂತೆ ರಾಷ್ಟ್ರಪತಿ ಭವನದಲ್ಲಿ ಇಂದು ಕ್ರೀಡಾಪಟುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು
ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಮಾರಂಭದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ದೊಮ್ಮರಾಜು, ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ರಾಷ್ಟ್ರಪತಿಗಳು ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜನವರಿ 2 ರಂದು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಹೇಳಿಕೆಯನ್ನು ಬಿಡುಗಡೆ ಮಾಡಿತ್ತು ಮತ್ತು ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು 2024 ರ ಪುರಸ್ಕೃತರ ಹೆಸರನ್ನು ಪ್ರಕಟಿಸಿತ್ತು ಇಂದು ನಡೆದ ಸಮಾರಂಬದಲ್ಲಿ ಭಾರತದ ರಾಷ್ಟ್ರಪತಿಗಳು ಖೇಲ್ ರತ್ನ, ಅರ್ಜುನ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿಯನ್ನು ಎಲ್ಲಾ ಪುರಸ್ಕೃತರಿಗೆ ಪ್ರದಾನ ಮಾಡಿದರು.

Tags :