For the best experience, open
https://m.samyuktakarnataka.in
on your mobile browser.

ರಾಹುಲ್ ಗಾಂಧಿ ಭಕ್ತಿಯ ಕನ್ನಡಕ ಹಾಕಿದರೆ ಎಲ್ಲೆಡೆ ರಾಮ ಕಾಣಿಸುತ್ತಾನೆ

05:11 PM Jan 24, 2024 IST | Samyukta Karnataka
ರಾಹುಲ್ ಗಾಂಧಿ ಭಕ್ತಿಯ ಕನ್ನಡಕ ಹಾಕಿದರೆ ಎಲ್ಲೆಡೆ ರಾಮ ಕಾಣಿಸುತ್ತಾನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ವರ್ತನೆಯಿಂದ ಬೇಸತ್ತು ಇಂಡಿ ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದು, ಶರತ್ ಪವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದು, ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಯಿಂದ ಹೊರಗೆ ಬಂದಿದ್ದಾರೆ. ಶರತ್ ಪವಾರ್ ಕೂಡ ಹೊರ ಬರಲಿದ್ದಾರೆ. ಬಿಹಾರ ಸಿಎಂ ನಿತಿಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ‌. ಇಂಡಿ ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ‌. ಕಾಂಗ್ರೆಸ್‌ನವರ ಕಟಾದಿಂದ ಅವರು ಹೊರಗೆ ಬರುತ್ತಿದ್ದಾರೆ. ಮೊದಿಯವರು 3ನೇ ಬಾರಿಗೆ ಪ್ರಧಾನಿಯಾದ ಮೇಲೆ ಒಕ್ಕೂಟ ಇರುವುದಿಲ್ಲ. ಮಮತಾ ಬ್ಯಾನರ್ಜಿಯವರಿಗೆ ಭ್ರಮ‌ನಿರಸನ ಆಗಿದೆ ಎಂದರು.
ಹೈಕಮಾಂಡ್ ನಿರ್ಧಾರಕ್ಕೆ ಬದ್ಧ
ಇದೇ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆ ತರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಅವರು ಜನಸಂಘದಿಂದ ಇದ್ದವರು, ಅವರಿಗೆ ಕಾಂಗ್ರೆಸ್‌ನಲ್ಲಿ ಇರಲು ಕಷ್ಟವಾಗಲಿದೆ. ಅವರನ್ನು ಪಕ್ಷಕ್ಕೆ ಕರೆತರಲು ಯಾರ ಮೂಲಕ ಪ್ರಯತ್ನ ನಡೆಸಲಾಗುತ್ತಿದೆ ಎನ್ನುವುದು ನನಗೆ ಗೊತ್ತಿಲ್ಲ. ಅವರ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.
ಬಿಹಾರದ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ಎತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತರು, ಒಬಿಸಿ ಕಾಂಗ್ರೆಸ್‌ನ ಗುತ್ತಿಗೆಯಲ್ಲ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು? ಕಾಂಗ್ರೆಸ್ ಯಾಕೆ ಕೊಡಲಿಲ್ಲಾ. ಪ್ರಣಬ್ ಮುಖರ್ಜಿ, ಅಬ್ದುಲ್ ಕಲಾಂ ಅವರಿಗೆ ನಾವು ಕೊಟ್ಟಿದ್ದೇವೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೆ ಅವರಿಗೆ ಬಿಜೆಪಿ ಗುರುತಿಸಿ ಭಾರತ ರತ್ನ ಗೌರ‌ವ‌ ಕೊಡುತ್ತಿದೆ ಎಂದರು.
ಭಕ್ತಿಯ ಕನ್ನಡಕ ಹಾಕಿದರೆ ರಾಮ ಕಾಣಿಸುತ್ತಾನೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಮನ ಕುರಿತು ಆಡಿರುವ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ರಾವಣನ ಕನ್ನಡಕ ಹಾಕಿಕೊಂಡು ನೋಡಿದರೆ ರಾಮ ರಾಜ್ಯ ಕಾಣಿಸುವುದಿಲ್ಲ. ಭಕ್ತಿಯ ಕನ್ನಡಕದಿಂದ ನೋಡಿದರೆ ಎಲ್ಲೆಡೆಯೂ ರಾಮ ಕಾಣಿಸುತ್ತಾನೆ ಎಂದು ಹೇಳಿದರು.
ಇನ್ನು ಹಾವೇರಿಯಲ್ಲಿ ಬಿಜೆಪಿ ಗೆಲ್ಲುವ ಅವಕಾಶ ಹೆಚ್ಚಿರುವುದರಿಂದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಬಿ.ಸಿ ಪಾಟೀಲ್, ಸಂದೀಪ್ ಪಾಟೀಲ್, ಈಶ್ವರಪ್ಪ ಮಗ ಬಹಳ ಜನ ಇದ್ದಾರೆ‌ ಎಂದು ಹೇಳಿದರು.