ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಿಕ್ಷಾ ಡಿಕ್ಕಿ: ಆಟೋ ಮೇಲೆತ್ತಿ ತಾಯಿ ರಕ್ಷಿಸಿದ ಪುತ್ರಿ

11:45 AM Sep 09, 2024 IST | Samyukta Karnataka

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ, ರಿಕ್ಷಾದಡಿ ಬಿದ್ದ ತಾಯಿಯನ್ನು ಪುತ್ರಿ ಹಾಗೂ ಸ್ಥಳಿಯರು ರಕ್ಷಿಸಿದ್ದಾರೆ.
ಮಂಗಳೂರಿನ ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ಸಂಭವಿಸಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ, ಪಿಗ್ಮಿ ಕಲೆಕ್ಷನ್​ ಮಾಡುತ್ತಿದ್ದ ರಾಜರತ್ನಪುರದ ನಿವಾಸಿ ಚೇತನಾ (35) ಗಾಯಗೊಂಡಿದ್ದಾರೆ. ಇವರ ಪುತ್ರಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವೈಭವಿ, ಸಮೀಪದ ಟ್ಯೂಷನ್​ ಸೆಂಟರ್‌ಗೆ ಹೋಗಿದ್ದರು. ಅಲ್ಲಿಂದ ಆಕೆಯನ್ನು ಕರೆತರಲು ಬರುತ್ತಿದ್ದ ಮಹಿಳೆ ರಸ್ತೆ ದಾಟುತ್ತಿದ್ದರು. ಈ ವೇಳೆ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ ವೇಗವಾಗಿ ರಿಕ್ಷಾ ಬರುತ್ತಿತ್ತು. ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಚಾಲಕ, ರಿಕ್ಷಾವನ್ನು ರಸ್ತೆ ಬದಿಗೆ ತಿರುಗಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಮಹಿಳೆಯ ಮೇಲೆ ಉರುಳಿತು. ಎದುರಿನಿಂದ ಬರುತ್ತಿದ್ದ ಪುತ್ರಿಯ ಎದುರಿನಲ್ಲೇ ಅಪಘಾತ ಸಂಭವಿಸಿದೆ ತಕ್ಷಣವೇ ಓಡಿಬಂದ ಪುತ್ರಿ ಹಾಗೂ ರಿಕ್ಷಾದಲ್ಲಿ ಕುಳಿತಿದ್ದ ಓರ್ವ ಪ್ರಯಾಣಿಕ ಮತ್ತು ರಿಕ್ಷಾ ಚಾಲಕ ರಿಕ್ಷಾವನ್ನು ಮೇಲಕ್ಕೆತ್ತಿ ಮಹಿಳೆಯನ್ನು ರಕ್ಷಿಸಿದರು. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಸುರತ್ಕಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕ ಸಹಿತ ಸ್ಥಳದಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Tags :
#autorikshaw#Mangalore#viralvideo#ಮಂಗಳೂರು#ರಿಕ್ಷಾಡಿಕ್ಕಿ
Next Article