ರೀಲ್ಸ್ಗಾಗಿ ಪ್ರಾಣ ಕಳೆದುಕೊಂಡ ಯುವತಿ
ಕಾರು ಚಲಾಯಿಸುತ್ತಿರುವದನ್ನು ರೀಲ್ಸ್ ಮಾಡಲು ಹೋಗಿ, ಓರ್ವ ಯುವತಿ ಕಾರಿನೊಂದಿಗೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಯುವತಿ ರಿವರ್ಸ್ ಗೇರ್ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶ್ವೇತಾ (25) ಮೃತ ದುರ್ದೈವಿ. ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ ಯುವತಿ ಆಕಸ್ಮಿಕವಾಗಿ ರಿವರ್ಸ್ ಗೇರ್ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ಕಂದಕಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾಳೆ. ಶ್ವೇತಾಗೆ ಕಾರು ಓಡಿಸುವಾಗ ರೀಲ್ಗಳನ್ನು ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್ ಮಾಡುವಂತೆ ಕೇಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್ 15 ಸೆಕೆಂಡ್ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.