ರೀಲ್ಸ್ ಮಾಡಿ ಬಹುಮಾನ ಗೆಲ್ಲಿ
ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ವರ್ಷವಾದ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷಿ÷್ಮಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.
ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾಗಿ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ವರ್ಷದಲ್ಲಿ ತಂದಿದೆ ಎನ್ನುವುದನ್ನು ಹಂಚಿಕೊಳ್ಳಲು ಕೋರಿದ್ದಾರೆ.
ರೀಲ್ಸ್ ಮಾಡಿ ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ಬುಕ್, ಇನ್ ಸ್ಟಾಗ್ರಾಮ್ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಸೂಚಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ವೈಯಕ್ತಿಕವಾಗಿ ಬಹುಮಾನ ನೀಡಲಾಗುವುದು. ಇಂದಿನಿಂದ ಸೆಪ್ಪಂಬರ್ ೩೦ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ಸ್ಟಾಗ್ರಾಮ್ಗಳಲ್ಲಿ ಹಂಚಿಕೊಳ್ಳಬೇಕಿದೆ.