ರುವಾಂಡದಲ್ಲಿ ಸಲ್ಮಾನ್ ಖಾನ್ ಬಂಧನ
ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ(ಎಲ್‌ಇಟಿ) ಸದಸ್ಯನನ್ನು ರುವಾಂಡಾ ಗುರುವಾರ ಭಾರತಕ್ಕೆ ಹಸ್ತಾಂತರಿಸಿದೆ.
ಅಂತಾರಾಷ್ಟ್ರೀಯವಾಗಿ ಬ್ಯಾನ್ ಆಗಿರುವ ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾ ಸದಸ್ಯ, ಸಲ್ಮಾನ್ ರೆಹಮಾನ್ ಖಾನ್‌ನನ್ನು ರುವಾಂಡಾ ತನಿಖಾ ಬ್ಯೂರೋ, ಇಂಟರ್‌ಪೋಲ್ ಮತ್ತು ರಾಷ್ಟ್ರೀಯ ಕೇಂದ್ರ ಬ್ಯೂರೋಗಳ ಸಹಯೋಗದೊಂದಿಗೆ ಬುಧವಾರ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ಬಂಧನ ಮಾಡಲಾಗಿದ್ದು, ಇಂದು ಭಾರತಕ್ಕೆ ಹಸ್ತಾಂತರಿಸಲಾಗಿದೆ.
ಪೋಸ್ಕೋ ಕೃತ್ಯ ಎಸಗಿ ಸಲ್ಮಾನ್ ಬೆಂಗಳೂರು ಜೈಲು ಸೇರಿದ್ದ. ಆಗ ಜೈಲುವಾಸದ ಅವಧಿಯಲ್ಲಿ ಜಿವಾವಾಧಿ ಶಿಕ್ಷೆಗೆ ಒಳಗಾಗಿದ್ದ ಉಗ್ರ ನಾಸೀರ್ ಸ್ನೇಹ ಬೆಳೆಸಿದ್ದ. ಈತನ ಮಾತಿಗೆ ಮರುಳಾಗಿ ಮೂಲಭೂತವಾದ ಕಡೆಗೆ ಆಕರ್ಷಿತನಾಗಿದ್ದ. ಅಷ್ಟೇ ಅಲ್ಲದೇ ಸಹ ಕೈದಿಗಳನ್ನು ಸೆಳೆದು ಅವರನ್ನು ಉಗ್ರರನ್ನಾಗಿ ರೂಪಿಸುತ್ತಿದ್ದ. ಜೈಲಿನಿಂದ ಬಿಡುಗಡೆಗೊಂಡ ನಂತರ ಉಗ್ರರ ಸಂಪರ್ಕ ಸಾಧಿಸಿ ಅವರಿಗೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳ ಸಂಗ್ರಹಣೆ ಮತ್ತು ವಿತರಣೆ ಮಾಡುವ ಮೂಲಕ ಸಹಕಾರ ನೀಡುತ್ತಿದ್ದ. ಭಯೋತ್ಪಾದನಾ ಕೃತ್ಯದಲ್ಲಿ ತನ್ನ ಹೆಸರು ಬೆಳಕಿಗೆ ಬರುತ್ತಿದ್ದಂತೆ ಸಲ್ಮಾನ್ ಭಾರತದಿಂದ ಪರಾರಿಯಾಗಿದ್ದ.