For the best experience, open
https://m.samyuktakarnataka.in
on your mobile browser.

ರೆಪೋ ದರದಲ್ಲಿ ಬದಲಾವಣೆ ಇಲ್ಲ

11:04 AM Oct 09, 2024 IST | Samyukta Karnataka
ರೆಪೋ ದರದಲ್ಲಿ ಬದಲಾವಣೆ ಇಲ್ಲ

ನವದೆಹಲಿ: ಆರ್​ಬಿಐನ ರೆಪೋದರ ಶೇ. 6.5ರಲ್ಲೇ ಮುಂದುವರಿಯಲಿದೆ.
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಅಕ್ಟೋಬರ್ 09ರಂದು ಬುಧವಾರ ಮುಕ್ತಾಯಗೊಂಡ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ್ದು, ರೆಪೋ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಮತ್ತೊಮ್ಮೆ ಯಾವುದೇ ಬದಲಾವಣೆ ತರದಿರಲು ನಿರ್ಧಾರ ಮಾಡಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ 5:1 ರಷ್ಟು ಸದಸ್ಯರು ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಆಗಸ್ಟ್ 2024 ತಿಂಗಳಿನಲ್ಲಿ ನಡೆದ ತನ್ನ ಹಿಂದಿನ ಸಭೆಯಲ್ಲಿಯೂ ಕೇಂದ್ರ ಬ್ಯಾಂಕ್‌ ಬಡ್ಡಿದರಗಳನ್ನು ಹೆಚ್ಚಿಸಿರಲಿಲ್ಲ ಯಥಾಸ್ಥಿತಿ ಉಳಿಸಿಕೊಂಡಿತು. ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆರ್ಥಿಕತೆ ಬಗ್ಗೆ ಆಶಾದಾಯಕವಾಗಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ. 7.2ರಷ್ಟು ಬೆಳೆಯಬಹುದು ಎಂದಿದ್ದಾರೆ. ಈ ಹಣಕಾಸು ವರ್ಷದ ಎರಡು, ಮೂರು ಮತ್ತು ನಾಲ್ಕನೇ ಕ್ವಾರ್ಟರ್​ನಲ್ಲಿ ಜಿಡಿಪಿ ಕ್ರಮವಾಗಿ ಶೇ. 7.0, ಶೇ. 7.4, ಮತ್ತು ಶೇ. 7.4ರ ದರದಲ್ಲಿ ಬೆಳೆಯಬಹುದು ಎಂದಿದ್ದಾರೆ. ಮುಂದಿನ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದೂ ಅಂದಾಜಿಸಿದ್ದಾರೆ.

Tags :