ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರೈತರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಿ ಮೋದಿ

01:58 PM Aug 25, 2024 IST | Samyukta Karnataka

ಬೆಂಗಳೂರು: ಕೇಂದ್ರ ಸರ್ಕಾರದಿಂದ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್ ಗೆ ₹8682 ( MSP) ಅಂತೆ ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ನೆರವಿಗಾಗಿ MSP ಅಡಿ ಹೆಸರು ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು ರಾಜ್ಯದ ರೈತರ ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ , Price Support Scheme (PSS) ಅಡಿ ಖರೀದಿಗೆ ಅನುಮತಿ ನೀಡಿದ್ದು 2215 MT ಹೆಸರುಕಾಳು ಬೆಳೆಯನ್ನು Rs.8682 ಪ್ರತಿ ಕ್ವಿಂಟಲ್ ನಂತೆ ಖರೀದಿ ಮಾಡಲಾಗುವುದು. ಅದೇ ರೀತಿ ಸೂರ್ಯಕಾಂತಿ ಬೆಳೆಯನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಅನುಮೋದನೆ ನೀಡಿದ್ದು 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಸರ್ಕಾರ ಈ ಯೋಜನೆ ಅಡಿ ಖರೀದಿಸಲಿದೆ.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವಿನಂತಿಸಿದ ಪತ್ರ ದಿನಾಂಕ 21.08.24 ಕೇಂದ್ರ ಕೃಷಿ ಸಚಿವಾಲಯಕ್ಕೆ ತಲುಪಿದ ತಕ್ಷಣ ನಾನು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ರಾಜ್ಯದ ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯನ್ನು ಖರೀದಿಸುವಂತೆ ವಿನಂತಿಸಿದ್ದೆ. ತಕ್ಷಣವೇ ಕೇಂದ್ರ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಅನುಮತಿ ನೀಡುವಂತೆ ಸೂಚಿಸಿದರು. ಅದರಂತೆ ಕೇಂದ್ರ ಸರ್ಕಾರ ದಿನಾಂಕ 22.08.24 ರಂದು ಪತ್ರದ ಮುಖಾಂತರ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ನಮ್ಮ ಮನವಿಗೆ ಸ್ಪಂದಿಸಿ ತಕ್ಷಣವೇ ಖರೀದಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರಿಗೆ ಧನ್ಯವಾದಗಳು. ರಾಜ್ಯ ಸರ್ಕಾರವು ತಕ್ಷಣವೇ ರಾಜ್ಯದ್ಯಂತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಕೋರುತ್ತೇನೆ. ದೇಶದ ಪ್ರತಿ ರೈತರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರ ಅವರ ಪ್ರತಿ ಸಮಸ್ಯೆಗೆ ಸೂಕ್ತ ಮತ್ತು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವುದರ ಮೂಲಕ ರೈತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

Next Article