ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರೈತರ ಮೇಲೆ ಲಾಠಿಚಾರ್ಜ್: ಸಿಎಂ ಸ್ಪಷ್ಟನೆ ನೀಡಲಿ

06:01 PM Nov 15, 2024 IST | Samyukta Karnataka

ಬೆಂಗಳೂರು: ವಕ್ಫ್​ ಆಸ್ತಿ ಕಿಚ್ಚು ದಿನದಿಂದ ದಿನಕ್ಕೆ ರೈತರ ನೆಮ್ಮದಿಗೆ ದಕ್ಕೆ ತರುವ ಹಂತಕ್ಕೆ ತಲುಪುತ್ತಿರುವುದನ್ನು ಗಮನಿಸಿದರೆ ಉಪಚುನಾವಣೆ ಮುಗಿದ ಬೆನ್ನಲ್ಲೇ ರೈತರ ಭೂಮಿ ಕಿತ್ತುಕೊಳ್ಳಲು ಕಾಂಗ್ರೆಸ್ ಸರ್ಕಾರವೇ ಅಧಿಕಾರಿಗಳಿಗೆ ಸೂಚಿಸಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್​ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಅಲ್ಲದೇ ರೈತರ ಟ್ರ್ಯಾಕ್ಟರ್​ ಅನ್ನು​​ ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿರುವ ನಡೆ ತುಘಲಕ್ ದರ್ಬಾರ್ ನೆನಪಿಸುವಂತಿದೆ. ಉಳುಮೆ ಮಾಡುವ ರೈತರಿಗೆ ಅಧಿಕಾರಿಗಳು ಕಿರುಕುಳ ಅಥವಾ ತೊಂದರೆ ಕೊಟ್ಟರೆ ಕರ್ನಾಟಕ ಬಿಜೆಪಿ ರೈತರ ಪರವಾಗಿ ಬೀದಿಗಿಳಿಯಲಿದೆ. ಅನ್ನದಾತರ ಮೇಲೆ ಲಾಠಿ ಪ್ರಯೋಗಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕ್ರಮ ಜರುಗಿಸಲಿ. ಈ ಘಟನೆಯ ಕುರಿತು ರಾಜ್ಯದ ರೈತ ಸಮುದಾಯಕ್ಕೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿ ಈ ಕುರಿತು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸುವೆ ಎಂದಿದ್ದಾರೆ.

Tags :
#ಚಿಕ್ಕಬಳ್ಳಾಪುರ#ವಕ್ಫ್‌#ವಿಜಯೇಂದ್ರಸಿದ್ದರಾಮಯ್ಯ
Next Article