ರೈತ, ಗೋವು ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಮಂಡ್ಯ: ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಒಂದು ಬಹು ಮುಖ್ಯವಾದ ವಿಚಾರ, ಗೋವುಗಳಿಗೆ ಮತ್ತು ಮುನುಷ್ಯರಿಗೆ ಮತ್ತು ಪ್ರಕೃತಿಗೆ ಅವಿನಾಭಾವ ಸಂಬಂಧ. ಭಾರತೀಯ ಪರಂಪರೆಯಲ್ಲಿ ಗೋ ಮಾತೆಗೆ ತನ್ನದೆ ಆದ ಸ್ಥಾನವಿದೆ. ಈ ದೇಶದಲ್ಲಿ ಕೃಷಿ ಏನಾದರು ಉಳಿದಿದ್ದರೆ, ಅದು ಗೋ ಮಾತೆಯ ಕಾಣಿಕೆ. ಆದರೆ, ರಾಜ್ಯದ ಕೋಟ್ಯಾಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಅಸಡ್ಡೆಯನ್ನು ತೋರಿಸುತ್ತಿದೆ. ಇದಕ್ಕೆ ಮೊನ್ನೆ ಮೊನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಹಸುವಿನ ಕೆಚ್ಚಲು ಕತ್ತರಿಸಿರುವ ಪ್ರಕರಣ ದಿಗ್ಗನೆ ಮೂಡಿಸದೆ. ಈ ಪ್ರಕರಣದಲ್ಲಿ ಒಂದು ದೊಡ್ಡ ಗ್ಯಾಂಗ್ ಕೈವಾಡವಿದೆ ಎಂದು ಸ್ಥಳೀಯ ಗೋಪಾಲಕರು ದೂರಿದ್ದಾರೆ, ಆದರೂ ಪೊಲೀಸ್ ಇಲಾಖೆ ನಾಮಕಾವಸ್ಥೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಪೊಲೀಸ್ ಇಲಾಖೆ ಕಸ್ಟ್‌ಡಿಗೆ ತೆಗೆದುಕೊಳ್ಳದೆ ಏಕಾಏಕಿ ಜೈಲಿಗಟ್ಟಿರುವುದು ಹಲವು ಅನುಮಾನ ಮೂಡಿಸುತ್ತಿದೆ, ಈ ಕೂಡಲೇ ಈ ಕೃತ್ಯದಲ್ಲಿ ಬಾಗವಹಿಸಿರುವ ಎಲ್ಲ ದುರುಳರನ್ನು ಬಂಧಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತ ನಡೆಸುತ್ತಿದ್ದ ಸಮಯದಲ್ಲಿ ರಾಜ್ಯಾದ್ಯಂತ ಒಟ್ಟು 15 ಜಿಲ್ಲೆಗಳಲ್ಲಿ ಗೋ ಶಾಲೆಗಳನ್ನು ಪ್ರಾರಭಿಸಿತ್ತದೆ. ಆದರೆ, ನಂತರ ಬಂದ ಕಾಂಗ್ರೆಸ್ ಸರ್ಕಾರವು ಬಹು ಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತರುವ ಉದ್ದೇಶದಿಂದ ಗೋ ಶಾಲೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿ ಅದರ ಮೂಲ ಉದ್ದೇಶಗಳಿಗೆ ತೊಂದರೆಕೊಡುವ ಮೂಲಕ ಗೋ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಕರ್ನಾಟಕ ರಾಜ್ಯದ ಮತದಾರರಿಗೆ ಮಾಡಿರುವ ಅನ್ಯಾಯವಾಗಿದೆ.
ರಾಜ್ಯದಲ್ಲಿ 1.10 ಕೋಟಿ ಜಾನುವಾರುಗಳಿದ್ದು, ಇವುಗಳ ಸಂರಕ್ಷಣೆಮಾಡಲು ಮತ್ತು ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಸಾಕಷ್ಟು ಕೇಂದ್ರ ಪುರಸ್ಕೃತ ಯೋಜನೆಗಳನ್ನು ರೂಪಿಸಿದೆ. ಈ ಕಾರ್ಯಕ್ರಮಗಳನ್ನು ಅನುಷ್ಠಾನಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲಗೊಂಡಿದೆ. ಈ ವಿಫಲತೆಯು ರಾಜ್ಯ ಸರ್ಕಾರದ ನಿಷ್ಕ್ರಿಯತೆಯನ್ನು ಎತ್ತಿ ತೋರಿಸುತ್ತದೆ. ಗೋ ಶಾಲೆಗಳನ್ನು ಮುಚ್ಚುವ ಮುಖಾಂತರ ಗೋ ಕಳ್ಳ ಸಾಗಣೆಯನ್ನು ಉತ್ತೇಜನ ನೀಡುವಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯ ರೈತ ಮೋರ್ಚಾವು ಸರ್ಕಾರವನ್ನು ಒತ್ತಾಯಿಸುವುದೇನೆಂದರೆ ಗೋ ಶಾಲೆಗಳನ್ನು ಪುನರಾರಂಭಿಸಬೇಕು, ಗೋ ಶಾಲೆಗಳಿಗೆ ವಿಶೇಷ ಅನುದಾನವನ್ನು ನೀಡಬೇಕು, ಕೇಂದ್ರ ಪುರಸ್ಕೃತ ಗೋ ಅಧಾರಿತ ಯೋಜನೆಗಳನ್ನು ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು, ಈ ರಾಜ್ಯದ ಬಹು ಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗದ ರೀತಿ ನಡೆದುಕೊಳ್ಳಬೇಕು ಎಂದು ಈ ಮೂಲಕ ಸರ್ಕಾರವನ್ನು ಆಗ್ರಹಿಸುತ್ತೇವೆ .