ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ: ರೈಲು ಸಂಚಾರ ಸ್ಥಗಿತ
ಹಾಸನ: ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ.
ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಡೆದಿದೆ. ಹಳಿಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು, ಮರಗಳು ಸಹ ಬಿದ್ದಿವೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಈ ಭೂಕುಸಿತವಾಗಿದೆ. ಹಾಸನ-ಮಂಗಳೂರು ಮತ್ತು ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತವಾಗಿದೆ. ಸಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ 6 ಕಡೆ ವಿವಿಧ ರೈಲುಗಳನ್ನು ದಿಢೀರ್ ಎಂದು ನಿಲುಗಡೆ ಮಾಡಲಾಗಿದೆ. ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದೆ. ನಿನ್ನೆ ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಬೈಲುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ.