ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲಾಡ್ಜ್‌ನಲ್ಲಿ ತಂಗಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ…

08:01 PM Jan 10, 2024 IST | Samyukta Karnataka

ಹಾವೇರಿ: ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ಅನ್ಯ ಕೋಮಿನ ಯುವಕ-ಯುವತಿ ಮೇಲೆ ಯುವಕರು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್‌ಗಿರಿ ಮೆರೆದಿರುವ ಘಟನೆ ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್‌ನಲ್ಲಿ ನಡೆದಿದೆ.
ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಲ್ಲಿರುವ ಲಾಡ್ಜ್‌ನಲ್ಲಿ ಶಿರಸಿ ಮೂಲದ ರೇವಣಕಟ್ಟಾದ ಸೋಮಶೇಖರ ಹಾಗೂ ವಿವಾಹಿತ ಮುಸ್ಲಿಂ ಮಹಿಳೆ ಸೋಮವಾರ ಮಧ್ಯಾಹ್ನದ ವೇಳೆಗೆ ರೂಮ್‌ಪಡೆದು ವಾಸವಾಗಿದ್ದಾರೆ. ಬುರ್ಕಾ ಹಾಕಿಕೊಂಡು ಅನ್ಯಕೋಮಿನ ಪುರುಷನ ಜತೆ ಲಾಡ್ಜ್‌ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಗಮನಿಸಿದ್ದ ಆಟೋ ಚಾಲಕ ಅದೇ ಸಮುದಾಯದ ಯುವಕರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಅರ್ಧಗಂಟೆಯಲ್ಲೇ ಜಮಾಯಿಸಿದ ಅಕ್ಕಿಆಲೂರಿನ ನಾಲ್ಕೈದು ಯುವಕರ ತಂಡ ಲಾಡ್ಜ್‌ ಕೊಠಡಿಗೆ ತೆರಳಿ ರೂಮ್‌ನಲ್ಲಿ ನೀರಿನ ಸಮಸ್ಯೆ ಇದೆ. ಸರಿಪಡಿಸಬೇಕು ಬಾಗಿಲು ತೆಗೆಯಿರಿ ಎಂದಿದ್ದಾರೆ. ಆಗ ಒಳಗಿದ್ದವರು ನೀರು ಬರುತ್ತಿದೆ ಎಂದರೂ ಪದೇ ಪದೇ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆದ ತಕ್ಷಣ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಅಲ್ಲದೇ ಮಹಿಳೆಯನ್ನು ಎಳೆದಾಡಿ ಬಟ್ಟೆ ಹರಿದು ಹೊಡೆದಿರುವ ವಿಡಿಯೋ ವೈರಲ್ ಆಗಿದ್ದು, ದೂರು ಸಹ ದಾಖಲಾಗಿದೆ.

Next Article