ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲಿಂಗಾಯಿತರು ಹಿಂದೂಗಳಲ್ಲ ಎಂಬ ಹೇಳಿಕೆ ರಾಜಕೀಯ ಪ್ರೇರಿತ

07:08 PM Dec 26, 2023 IST | Samyukta Karnataka

ಬೆಂಗಳೂರು: ಲಿಂಗಾಯಿತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು "ಲಿಂಗಾಯಿತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ.
ಹಿಂದುತ್ವ ಈ ನೆಲದ ಆತ್ಮ, ಬಸವಣ್ಣನವರು ಆರಾಧಿಸಿದ ಲಿಂಗವೂ ಈಶ್ವರನ ಅಂಶವೇ, ಹಿಂದುತ್ವ ಬದುಕುವ ದಾರಿ. ಜಗತ್ತಿನ ಯಾವುದಾದರೂ ಧರ್ಮ ಇನ್ನೊಬ್ಬರ ಮೇಲೆ ದಾಳಿ ಮಾಡದೆ, ಎಲ್ಲರನ್ನು ಗೌರವಿಸಿರುವುದು ಹಿಂದುತ್ವ ಮಾತ್ರ. ಲಿಂಗಾಯಿತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ. 2018ರ ವಿಧಾನಸಭೆ ಚುನಾವಣೆಗಾಗಿ ಸಿದ್ದರಾಮಯ್ಯನವರು ಈ ಗೊಂದಲವನ್ನು ಸೃಷ್ಟಿ ಮಾಡಿದ್ದರು, ಈಗ ಲೋಕಸಭೆ ಚುನಾವಣೆಗೆ ಬೇರೆಯಾವುದೇ ಚರ್ಚಾ ವಿಷಯವಿಲ್ಲದೆ ಈ ಪ್ರತ್ಯೇಕ ಧರ್ಮದ ಚರ್ಚೆ ಆರಂಭಿಸಿದ್ದಾರೆ. ಪಂಚಪೀಠಗಳು, ಬಸವಣ್ಣನವರ ಅನುಯಾಯಿಗಳು ಹಾಗು ಶರಣರ ತತ್ವಗಳು ಎಲ್ಲವೂ ಹಿಂದೂ ಸಂಸ್ಕೃತಿಯ ಭಾಗವೇ, ಅಲ್ಲಿಯೂ ಶಿವ, ಇಲ್ಲಿಯೂ ಶಿವನೇ! " ವೀರಶೈವ ಲಿಂಗಾಯಿತ" ಹಿಂದು ಸಂಸ್ಕೃತಿಯ ಭಾಗವಾಗಿದೆ. ಹರ ಹರ ಮಹದೇವ್!" ಎಂದು ಬರೆದುಕೊಂಡಿದ್ದಾರೆ.

Next Article