ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

12:48 PM Dec 09, 2023 IST | Samyukta Karnataka

ಬೆಂಗಳೂರು: ಹಿರಿಯ ನಟಿ ಲೀಲಾವತಿಯವರು ಕರ್ನಾಟಕ ಚಲನಚಿತ್ರ ಕಂಡ ಅಪರೂಪದ ನೈಜ ನಟನೆಯ ಕಲಾವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಹಿರಿಯ ನಟಿ ಲೀಲಾವತಿಯವರ ಅಂತ್ಯಸಂಸ್ಕಾರಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ವಿದ್ಯಾರ್ಥಿ ಜೀವನದಲ್ಲಿ ಲೀಲಾವತಿಯವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದವನು. ತನಗೆ ವಹಿಸುವ ಪ್ರತಿ ಪಾತ್ರಕ್ಕೂ ಜೀವತುಂಬುತ್ತಿದ್ದ ಓರ್ವ ಪರಿಪೂರ್ಣ ಕಲಾವಿದೆ. ಇಂದಿಗೂ ಅವರ ನಟನೆ ನನ್ನ ಕಣ್ಣೆದುರೇ ಇದ್ದಂತಿದೆ.
ನಟನೆಯ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ತಾವು ಗಳಿಸಿದ ಹಣದಲ್ಲಿ ನೂರಾರು ಜೀವಗಳಿಗೆ ನೆರವಾದ ಹೃದಯವಂತೆ. ದಯೆಯೇ ಧರ್ಮದ ಮೂಲವಯ್ಯ ಎಂಬ ಮಾತನ್ನು ತಮ್ಮ ಬದುಕಿನಲ್ಲಿ ಯಥಾವತ್ತು ಅಳವಡಿಸಿಕೊಂಡಿದ್ದ ಲೀಲಾವತಿ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

Next Article